More

    ಹೋರಾಟದಿಂದ ಹಿಂದೆ ಸರಿಯುವುದಿಲ್ಲ

    ಕೂಡ್ಲಿಗಿ: ರಾಜ್ಯ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ-ಭತ್ಯೆಗಳ ಪರೀಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ. ಶಿವರಾಜ್ ಹೇಳಿದರು.

    ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ನ್ಯಾಯಾಲಯದ ಸಿಬ್ಬಂದಿ ಆಯೋಜಸಿದ್ದ ಸಭೆಯಲ್ಲಿ ಮಾತನಾಡಿದರು.

    ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು, 2022 ನೇ ಜುಲೈ1 ರಿಂದ ಪೂರ್ವಾನ್ವಯ ವಾಗುವಂತೆ ಶೇ.40ರಷ್ಟು ವೇತನ ಹೆಚ್ಚಿಸಿ, ಅಧಿಕೃತ ಆದೇಶ ಹೊರಡಿಸುವ ಮೂಲಕ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

    ಪಂಜಾಬ್, ರಾಜಸ್ತಾನ, ಛತ್ತಿಸ್‌ಘಡ, ಜಾಖರ್ಂಡ್, ಹಿಮಾಚಲಪ್ರದೇಶ ರಾಜ್ಯಗಳ ಮಾದರಿಯಲ್ಲಿ ಎನ್‌ಪಿಎಸ್ ರದ್ದು ಪಡಿಸಿ, ಒಪಿಎಸ್ ಯೋಜನೆ ಜಾರಿಗೊಳಿಸುವ ಮೂಲಕ ಸರ್ಕಾರಿ ನೌಕರರ ಹಿತರಕ್ಷಣೆಗೆ ಮುಂದಾಗಬೇಕು ಎಂದರು. ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ತುಂಬಿಲ್ಲ. ಇಂಥಹ ಹೆಚ್ಚುವರಿ ಕೆಲಸವನ್ನು ಸಹ ನೌಕರರು ಮಾಡಿ ಸಾರ್ವಜನಿಕರ ಹಿತ ಕಾಪಾಡಿಕೊಂಡು ಬಂದಿದ್ದಾರೆ. ಅದರೂ ಸರ್ಕಾರಕ್ಕೆ ನೌಕರರ ಹಿತ ಕಾಯಲು ಹಿಂದೇಟು ಹಾಕುತ್ತಿರುವುದು ತರವಲ್ಲ ಎಂದರು.

    ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಸಿರಬಿ ಅಂಜಿನಪ್ಪ, ನ್ಯಾಯಾಂಗ ಇಲಾಖೆ ಶಿರಸ್ತೆದಾರರಾದ ಎಚ್. ನಾಗರಾಜ್, ನಾಗಮ್ಮ, ಕೆ.ಮಂಗಳ, ಶ್ರೀನಿವಾಸ ಜೋಷಿ, ಜಯಶ್ರೀ ದಳವಾಯಿ, ಪಾಂಡುರಂಗ, ಪಕ್ಕೀರಪ್ಪ, ರಘಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts