More

    ಹ್ಯಾಟ್ರಿಕ್ ಜಯ, ದಾವಣಗೆರೆಯಲ್ಲಿ ಬಿಜೆಪಿ ವಿಜಯೋತ್ಸವ

    ದಾವಣಗೆರೆ: ಪಂಚ ರಾಜ್ಯಗಳ ಚುನಾವಣೆ ಪೈಕಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಘಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ವಿಜಯೋತ್ಸವ ಆಚರಿಸಿದರು.
    ಜಯದೇವ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು,ಕಾರ್ಯಕರ್ತರು ಜಯಘೋಷ ಕೂಗಿದರಲ್ಲದೆ, ಸಿಹಿ ವಿತರಿಸಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ಮೂರು ರಾಜ್ಯಗಳ ಮತದಾರರು ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ಆಡಳಿತ ಒಪ್ಪಿಕೊಂಡು ಬಿಜೆಪಿಗೆ ಮತ ಚಲಾಯಿಸಿದ್ದು, ಇದು ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಪ್ರೇರಣೆ ನೀಡಿದೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ ಎಂಬುದು ಸಾಬೀತಾಗಿದೆ. ಇದನ್ನು ದೇಶದ ಜನತೆ ಮನಗಂಡಿದ್ದು, ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ ತಂದುಕೊಡುವ ಮೂಲಕ ಪ್ರಧಾನಿಗೆ ಶಕ್ತಿ ನೀಡಬೇಕು ಎಂದರು.
    ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ಕಾಂಗ್ರೆಸ್ ನಾಯಕರು ಪಂಚ ರಾಜ್ಯಗಳ ಚುನಾವಣೆಯನ್ನು ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿಸಿದ್ದರು. ಜಗಮೆಚ್ಚಿದ ನಾಯಕ ಮೋದಿಯವರ ಗ್ಯಾರಂಟಿಯೇ ತಮಗೆ ಒಪ್ಪಿಗೆ ಎಂಬುದನ್ನು ಬಿಜೆಪಿಗೆ ಗೆಲುವು ತಂದುಕೊಟ್ಟು ತೋರಿಸಿದ್ದಾರೆ ಎಂದು ಹೇಳಿದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ವಕ್ತಾರ ಡಿ.ಎಸ್. ಶಿವಶಂಕರ್, ದೂಡ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ್, ಮಂಜಾನಾಯ್ಕ, ಪಾಲಿಕೆ ಸದಸ್ಯ ಸೋಗಿ ಶಾಂತ್‌ಕುಮಾರ್, ಟಿಂಕರ್ ಮಂಜಣ್ಣ, ಶಿವನಗೌಡ ಪಾಟೀಲ್, ಉಮೇಶ್ ಪಾಟೀಲ್, ಪುಷ್ಪಾ ವಾಲಿ, ಕಲ್ಲೇಶ್, ಮಂಜುಳಾ ಮಹೇಶ್ ಇತರರು ಇದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts