25.9 C
Bengaluru
Wednesday, January 22, 2020

ನಿತ್ಯ ಭವಿಷ್ಯ: ಈ ರಾಶಿಯವರಿಗೆ ದೂರದ ಊರಿನ ಪ್ರವಾಸ ಎದುರಾಗುವ ಸಾಧ್ಯತೆಯಿಂದ ಅನಿರೀಕ್ಷಿತ ಹರ್ಷ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಮೇಷ: ಉತ್ಸಾಹ, ಲವಲವಿಕೆಗಳಿಂದ ಚಟುವಟಿಕೆಯಲ್ಲಿ ಇರಲು ಇಂದಿನ ಬೆಳವಣಿಗೆಗಳು ನಿಮಗೆ ಸಹಕಾರಿಯಾಗಿವೆ. ಶುಭಸಂಖ್ಯೆ: 7

ವೃಷಭ: ಒಂದು ರೀತಿಯ ನಿರುತ್ಸಾಹ ಮನೋಭಾವ ತಲೆದೋರಬಹುದಾದರೂ ಪರಿಚಿತರೊಬ್ಬರ ಬೆಂಬಲದಿಂದ ಉತ್ಸಾಹ ಸಾಧ್ಯ. ಶುಭಸಂಖ್ಯೆ: 2

ಮಿಥುನ: ದೂರದ ಊರಿನ ಪ್ರವಾಸ ಎದುರಾಗುವ ಸಾಧ್ಯತೆಯಿಂದ ಅನಿರೀಕ್ಷಿತವಾದ ಹರ್ಷಕ್ಕೆ ಹೆಚ್ಚಿನ ದಾರಿ ಇದೆ. ಶುಭಸಂಖ್ಯೆ: 5

ಕಟಕ: ದೋಣಿಯ ಪಯಣ ನಿಲ್ಲಿಸದೆ ಮುಂದುವರಿಸಿ. ಆದರೆ ಎರಡು ದೋಣಿಗಳ ಮೇಲೆ ಸಂಚಾರ ಮಾಡುವುದನ್ನು ಕೈಬಿಡಿ. ಶುಭಸಂಖ್ಯೆ: 1

ಸಿಂಹ: ಪದೇಪದೆ ಅದೇ ತಪ್ಪು ಮಾಡಿದರೆ ನಿಮ್ಮ ಬಗ್ಗೆ ಅಪ್ರಿಯ ಭಾವನೆ ಮೂಡಿಸಲು ದಾರಿ ಮಾಡಿಕೊಟ್ಟಂತಾದೀತು. ಶುಭಸಂಖ್ಯೆ: 6

ಕನ್ಯಾ: ನಿಮ್ಮಲ್ಲಿರುವ ಪ್ರತಿಭೆಯಿಂದ ಜನರ ಗಮನ ಸೆಳೆದು ಅಪರೂಪದ ಪ್ರಶಂಸೆ ಪಡೆಯಲು ಅವಕಾಶಗಳು ಜಾಸ್ತಿ. ಶುಭಸಂಖ್ಯೆ: 8

ತುಲಾ: ಚಿಟಿಕೆ ಹೊಡೆಯುವುದರೊಳಗೆ ಹಣ ಬರಬಹುದು ಎಂಬ ಭ್ರಮೆಯಲ್ಲಿ ಕುಳಿತಿರಬೇಡಿ. ಎಚ್ಚರವಾಗಿರಿ. ಶುಭಸಂಖ್ಯೆ: 5

ವೃಶ್ಚಿಕ: ನಿನ್ನೆಯ ಸೋಲು ಇಂದು ಕೂಡ ಎದುರಾಗಬಹುದು ಎಂಬ ನಕಾರಾತ್ಮಕ ಯೋಚನೆಗಳನ್ನು ಮಾಡಬೇಡಿ. ಶುಭಸಂಖ್ಯೆ: 3

ಧನುಸ್ಸು: ಮಂಜುನಾಥಸ್ವಾಮಿಯನ್ನು ಆರಾಧಿಸಿ. ಧೂರ್ತರು ನಡೆಸುವ ಕಾರಸ್ಥಾನಗಳ ವಿರುದ್ಧ ರಕ್ಷೆ ಪಡೆಯಬಹುದು. ಶುಭಸಂಖ್ಯೆ: 9

ಮಕರ: ತರಕಾರಿ, ಹಾಲು, ಹೈನುಗಾರಿಕೆ ಸರಕುಗಳ ಮಾರಾಟದಲ್ಲಿ ವಿನೂತನ ದಾಖಲೆಯ ಲಾಭ ಗಳಿಸಲು ಸಾಧ್ಯ. ಶುಭಸಂಖ್ಯೆ: 7

ಕುಂಭ: ಸದ್ಯದ ನಿಮ್ಮ ಏಕತಾನತೆಯನ್ನು ಮುರಿದು ಹೊಸದಕ್ಕೆ ದಾರಿ ಮಾಡಿಕೊಡಲು ವಿಶೇಷ ಅವಕಾಶ ಬರಲಿದೆ. ಶುಭಸಂಖ್ಯೆ: 4

ಮೀನ: ಮೂಕಾಂಬಿಕೆಯನ್ನು ಏಕಾಗ್ರತೆಯಿಂದ ಸ್ತುತಿಸಿ. ರಾಕ್ಷಸ ಶಕ್ತಿಗಳ ವಿರುದ್ಧ ಮೇಲುಗೈ ಸಾಧಿಸಲು ಶಕ್ತಿ ಲಭ್ಯ. ಶುಭಸಂಖ್ಯೆ: 1 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...