1 ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ವಶ

ಭದ್ರಾವತಿ: ನಗರದ ಬಿ.ಎಚ್.ರಸ್ತೆ ಅಂಗಡಿಯೊಂದರಲ್ಲಿ 1 ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ಕವರ್ ಸೇರಿ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳನ್ನು ನಗರಸಭೆ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದರು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವು ದಿನಸಿ ಅಂಗಡಿಗಳಿಗೆ ಖುದ್ದಾಗಿ ಭೇಟಿ ನೀಡಿ ತಪಾಸಣೆ ನಡೆಸಿದ ಪೌರಾಯುಕ್ತ ಮನೋಹರ್, ಒಂದೇ ಅಂಗಡಿಯಲ್ಲಿ 1 ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ಲೋಟ, ಕವರ್​ಗಳು ದೊರೆತಿದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *