17 C
Bangalore
Monday, December 9, 2019

ಮಹಿಳೆ ಹೊಟ್ಟೆಯಿಂದ ಬರೋಬ್ಬರಿ 1.5 ಕೆ.ಜಿ ಆಭರಣ ಹಾಗೂ 90 ನಾಣ್ಯಗಳನ್ನು ಹೊರ ತೆಗೆದ ವೈದ್ಯರು

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಬಿರ್ಭಮ್​​ (ಪಶ್ಚಿಮ ಬಂಗಾಳ): ಮಾನಸಿಕ ಅಸ್ವಸ್ಥೆಯ ಹೊಟ್ಟೆಯಲ್ಲಿದ್ದ 1.5 ಕೆ.ಜಿ ಆಭರಣ ಹಾಗೂ 90 ನಾಣ್ಯಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿರುವ ಘಟನೆ ಬಿರ್ಭಮ್ ​​​​ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರೇ ಬೆರಗಾಗಿದ್ದಾರೆ. ಯುವತಿ ಹೊಟ್ಟೆಯಲ್ಲಿ 5 ಹಾಗೂ 10 ರೂಪಾಯಿ 90 ನಾಣ್ಯಗಳು ಹಾಗೂ ಸರ, ಮೂಗುತಿ, ಕಿವಿಯೋಲೆ ಮತ್ತು ಬಳೆ ಸೇರಿದಂತೆ 1.5 ಕೆ.ಜಿ ತೂಕದ ಆಭರಣಗಳನ್ನು ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಯುವತಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಸೇರಿದ್ದರು. ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ಹೊಟ್ಟೆಯನ್ನು ಸ್ಕ್ಯಾನ್​​ ಮಾಡಿದ್ದಾರೆ. ಈ ವೇಳೆ ಹೊಟ್ಟೆಯಲ್ಲಿ ನಾಣ್ಯಗಳು ಮತ್ತು ಆಭರಣಗಳು ಇರುವುದಾಗಿ ಗೋಚರವಾಗಿದೆ. ತಕ್ಷಣ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ತಾಮ್ರ, ಬೆಳ್ಳಿ ಮತ್ತು ಚಿನ್ನದ ಆಭರಣಗಳು ಸೇರಿದಂತೆ ಅನೇಕ ನಾಣ್ಯಗಳು ಯುವತಿ ಹೊಟ್ಟೆಯಲ್ಲಿ ಸೇರಿದ್ದವು ಎಂದು ಆಸ್ಪತ್ರೆಯ ವೈದ್ಯ ಸಿದ್ದಾರ್ಥ್​ ಬಿಸ್ವಾನ್​​​​ ತಿಳಿಸಿದ್ದಾರೆ.

ಪ್ರತಿನಿತ್ಯ ಮನೆಯಲ್ಲಿ ಆಭರಣಗಳು ನಾಪತ್ತೆಯಾಗುತ್ತಿರುವುದು ಆಕೆಯ ತಾಯಿಯ ಗಮನಕ್ಕೆ ಬಂದಿದೆ. ತನ್ನ ಮಗಳ ಹಾವ ಭಾವಗಳನ್ನು ಸೂಕ್ಷ್ಮವಾಗಿ ಗಮನಿಸಿದ ತಾಯಿಗೆ, ಆಕೆ ಆಭರಣಗಳನ್ನು ತಿನ್ನುತ್ತಿರುವುದರ ಬಗ್ಗೆ ತಿಳಿದಿದೆ. ಮಗಳನ್ನು ಆಭರಣಗಳ ಬಗ್ಗೆ ಗಟ್ಟಿಯಾಗಿ ಕೇಳಿದಾಗ ಆಕೆ ಅಳುತ್ತಿದ್ದಳು. ಆಕೆಯ ಸೋದರ ಮಾವನ ಅಂಗಡಿಯಿಂದ ನಾಣ್ಯಗಳನ್ನು ತೆಗೆದುಕೊಳ್ಳುತ್ತಿದ್ದಳು ಎಂದು ಆಕೆಯ ತಾಯಿ ಮಾಹಿತಿ ನೀಡಿದ್ದಾರೆ.

ಮಹಿಳೆಯ ಆರೋಗ್ಯ ಸ್ಥಿತಿ ಹಲವು ಕಳೆದ ಎರಡು ತಿಂಗಳಿನಿಂದ ಹದೆಗೆಟ್ಟಿತ್ತು. ಅನೇಕ ಆಸ್ಪತ್ರೆಗಳನ್ನು ಚಿಕಿತ್ಸೆ ಕೊಡಿಸಿದರು ವಾಸಿಯಾಗಿರಲಿಲ್ಲ. ಕೊನೆಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಆಭರಣಗಳನ್ನು ಹೊರತೆಗೆದಿದ್ದಾರೆ. (ಏಜೆನ್ಸೀಸ್​)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...