More

    1.50 ಲಕ್ಷ ರೂ. ಮೌಲ್ಯದ ಮೊಬೈಲ್ ಕಸಿದು ಪರಾರಿ

    ಮೈಸೂರು: ಬಸ್‌ಗಾಗಿ ಕಾಯುತ್ತಿದ್ದ ಯುವಕನಿಂದ ಕಳ್ಳನೊಬ್ಬ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಸಿದು ಪರಾರಿಯಾಗಿದ್ದಾನೆ.
    ನಗರದ ಟಿ.ಕೆ. ಬಡಾವಣೆಯ ದಿನೇಶ್ ಸುಮಾರು 1.50 ಲಕ್ಷ ರೂ. ಮೌಲ್ಯದ ಮೊಬೈಲ್ ಕಳೆದುಕೊಂಡಿದ್ದಾರೆ. ನಗರದ ಗ್ರಾಮಾಂತರ ಬಸ್ ನಿಲ್ದಾಣದ ಟಿಕೆಟ್ ಕೌಂಟರ್ ಬಳಿ ಮಂಗಳವಾರ ಮುಂಜಾನೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ದುಷ್ಕರ್ಮಿಯೊಬ್ಬ ಜೇಬಿನಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
    ದಿನೇಶ್ ನೀಡಿದ ದೂರಿನ ಮೇರೆಗೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts