GP TAX ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಒಂದೇ ದಿನ 1.52 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

GP TAX

ಕಾರವಾರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳು ಒಂದೇ ದಿನದಲ್ಲಿ 1.52  ಕೋಟಿ ರೂ. ತೆರಿಗೆ(GP TAX) ಸಂಗ್ರಹಿಸುವ ಮೂಲಕ ಸಾಧನೆ ಮಾಡಿವೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ತೆರಿಗೆ ವಸೂಲಾತಿ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ಜಾಗೃತಿಯೊಂದಿಗೆ 2024-25 ನೇ ಸಾಲಿನ ತೆರಿಗೆ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಗಿತ್ತು.

ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ ಅಧಿಕಾರಿಗಳು, ಸಿಬ್ಬಂದಿಗಳ ಸಹಾಯದಿಂದ ಡಿ. 12 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 7 ರವರೆಗೆ ತೆರಿಗೆ ವಸೂಲಾತಿ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

GP TAX ಬೇಡಿಕೆ ಎಷ್ಟು..?

ಅದರಂತೆ 2024-25 ನೇ ಸಾಲಿನ ಒಟ್ಟು  ಬೇಡಿಕೆ ರೂ. 23 ಕೋಟಿ 67 ಲಕ್ಷಗಳಾಗಿದ್ದು, ಡಿ.12 ರಂದು ನಡೆದ ಒಂದು ದಿನದ ತೆರಿಗೆ ವಸೂಲಾತಿ ಅಭಿಯಾನದಲ್ಲಿ ರೂ. 1,52,65,133 ಕರ ಸಂಗ್ರಹಿಸಲಾಗಿದೆ.ಕರ ವಸೂಲಾತಿಗೆ ಯಾವುದೇ ಒತ್ತಡ ಹೇರದೆ ಈ ರೀತಿ ಸಾಧನೆ ಮಾಡಿರುವುದು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನರು ಸ್ವಯಂ ಪ್ರೇರಿತರಾಗಿ ತೆರಿಗೆ ಪಾವತಿಸಿರುವುದು ಸಂತೋಷದ ವಿಷಯವಾಗಿದೆ.,

ಒಂದು ದಿನದ ತೆರಿಗೆ ವಸೂಲಾತಿಯಲ್ಲಿ ಅಭಿಯಾನದಲ್ಲಿ ಪಾಲ್ಗೊಂಡ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರುಗಳು ಹಾಗೂ ಗ್ರಾಮ ಪಂಚಾಯತ ಅಧಿಕಾರಿಗಳು, ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ(ಅಭಿವೃದ್ಧಿ) ಅಭಿನಂದನೆಯನ್ನು ಸಲ್ಲಿಸಿದ್ದಾರೆ.

 

ಇದನ್ನೂ ಓದಿ: ಭಟ್ಕಳ ವಿದ್ಯಾಂಜಲಿ ಪಬ್ಲಿಕ್ ಶಾಲೆಗೆ ರಾಷ್ಟ್ರ ಪ್ರಶಸ್ತಿ ಗರಿhttps://www.vijayavani.net/bhatkal-vidyanjali-public-school-wins-national-award

https://www.facebook.com/share/p/1Agw5v6gdh/

Share This Article

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …

27 ವರ್ಷದ ನಂತ್ರ ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…