More

    ಕಣ್ಣೂರಲ್ಲಿ 1.78 ಕಿ.ಗ್ರಾಂ ಚಿನ್ನ ವಶ, ಕಾಸರಗೋಡು ನಿವಾಸಿ ಬಂಧನ

    ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 1.78ಕಿ.ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಮೆಹರೂಫ್ ಮಹಮ್ಮದ್ ಎಂಬಾತನನ್ನು ಬಂಧಿಸಿದ್ದಾರೆ. ಅಬುದಾಬಿಯಿಂದ ಶುಕ್ರವಾರ ಬೆಳಗ್ಗೆ ಆಗಮಿಸಿದ ವಿಮಾನದಿಂದ ಇಳಿದ ಮೆಹರೂಫ್ ಮಹಮ್ಮದ್‌ನ ದೇಹ ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಕಣ್ಣೂರು ವಿಮಾನ ನಿಲ್ದಾಣ ಮೂಲಕ ಭಾರಿ ಪ್ರಮಾಣದ ಚಿನ್ನ ಕಳ್ಳಸಾಗಣಿಕೆಯಾಗುವ ಬಗ್ಗೆ ಲಭಿಸಿದ ಮಾಹಿತಿಯನ್ವಯ ಕಸ್ಟಂಸ್ ಹಾಗೂ ಡಿಆರ್‌ಐ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts