ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಓರ್ವ ಕಾರ್ಮಿಕ ಸಾವು

Fire Incident
Published on

ಚೆನ್ನೈ: ಪಟಾಕಿ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧು​ನಗರ ಜಿಲ್ಲೆಯ ಸತ್ತೂರು ಸಮೀಪದ ಬನೈಯಾಡಿಪಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕಂಡಿಯಾಪುರ ಷಣ್ಮುಗ (36) ಎಂದು ಗುರುತಿಸಲಾಗಿದ್ದು, ಜಯಪಾಲ್​ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ದುರಂತ ಸಂಘವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜಯಪಾಲ್​ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ದುರಂತ ಸಂಭವಿಸಿದ್ದು, ಪಟಾಕಿ ತಯಾರಿಸಲು ಕಚ್ಚಾ ವಸ್ತುಗಳನ್ನು ಸಿದ್ದಪಡಿಸುವ ವೇಳೆ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲೇ ಕಚ್ಚಾ ವಸ್ತುಗಳಿದ್ದ ಕೊಠಡಿ ಸ್ಪೋಟಗೊಂಡಿದ್ದು, ಕಾರ್ಮಿಕ ಷಣ್ಮುಗ ಸ್ಥಳದಲ್ಲೇ ಅಸುನೀಗಿದ್ದಾರೆ. ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net