More

    ಸಂಕ್ರಾಂತಿ ಸಂಭ್ರಮದ ಸಂದರ್ಭದಲ್ಲಿ ದುರಂತ; ಕಾಲ್ತುಳಿತಕ್ಕೆ ಸಿಲುಕಿ ಒಬ್ಬರ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

    ಒಡಿಶಾ: ಮಕರ ಸಂಕ್ರಾಂತಿಯ ಸಂಭ್ರಮದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಕಟಕ್​ ಜಿಲ್ಲೆಯಲ್ಲಿ ಏರ್ಪಡಿಸಿದ್ದ ಮಕರ ಮೇಳದಲ್ಲಿ ಈ ದುರಂತ ಸಂಭವಿಸಿದೆ.

    ಇಲ್ಲಿನ ಸಿಂಗನಾಥ ದೇವಸ್ಥಾನಕ್ಕೆ ಸಂಪರ್ಕಿಸುವ ಬದಂಬ-ಗೋಪಿನಾಥಪುರದ ಟಿ-ಬ್ರಿಡ್ಜ್​ನಲ್ಲಿ ಈ ಕಾಲ್ತುಳಿತ ಉಂಟಾಗಿದ್ದು, ಈ ಸಂದರ್ಭದಲ್ಲಿ ಕಾಲಡಿಗೆ ಸಿಲುಕಿದ 55 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಈಕೆಯ ಸಾವನ್ನು ಅಧಿಕಾರಿಗಳು ಖಚಿತಪಡಿಸಿದ್ದು, 12 ವರ್ಷದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿಯೂ ತಿಳಿಸಿದ್ದಾರೆ.

    ಸಿಂಗನಾಥ ದರ್ಶನ ಹಾಗೂ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಮಕರ ಮೇಳಕ್ಕೆ ಮಧ್ಯಾಹ್ನದಿಂದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಇಲ್ಲಿಗೆ ಬಂದಿದ್ದು, ಬಳಿಕ ಒಂದು ಸಂದರ್ಭದಲ್ಲಿ ನೂಕುನುಗ್ಗಲು ಹೆಚ್ಚಾಗಿ ಕಾಲ್ತುಳಿತ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

    ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಕಾನೂನುಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೂಡ ವ್ಯವಸ್ಥೆ ಮಾಡಲಾಗಿದೆ. –ಏಜೆನ್ಸೀಸ್

    ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..

    ಈ ವಿಷಯದಲ್ಲಂತೂ ಡಾ.ಬ್ರೋ ‘ಸೂಪರ್ ಸ್ಟಾರ್​’; ‘ಎಷ್ಟು ಸಾವಿರ ಕೊಟ್ರೂ ಅದನ್ನು ಮಾತ್ರ ಮಾಡಲ್ಲ’ ಅಂತಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts