More

    ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ; 5 ನೇ ಮಹಡಿಯಿಂದ ಜಿಗಿದ ಮಹಿಳೆಯರು

    ನವದೆಹಲಿ: ವಸತಿ ಸಮುಚ್ಛಯ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 83 ವರ್ಷದ ವೃದ್ಧೆ ಮೃತಪಟ್ಟಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ನಗರದಲ್ಲಿ ನಡೆದಿದೆ.

    ದ್ವಾರಕಾ ನಗರದ ಸೆಕ್ಟರ್​ 10ರಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣ ಉಳಿಸಿಕೊಳ್ಳಲು ಇಬ್ಬರು ಮಹಿಳೆಯರು 4 ಮತ್ತು 5ನೇ ಮಹಡಿಯಿಂದ ಜಿಗಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ 5ನೇ ಮಹಡಿಗೂ ವ್ಯಾಪಿಸಿದೆ. ಪ್ರಾಣ ಉಳಿಸಿಕೊಳ್ಳಲು ಇಬ್ಬರು ಮಹಿಳೆಯರು ಜಿಗಿದಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts