ಆಕ್ಷೇಪಾರ್ಹ ಪೋಸ್ಟ್: ಎರಡು ಗುಂಪುಗಳ ಘರ್ಷಣೆ, 144 ಸೆಕ್ಷನ್​ ಜಾರಿ

motora
Published on

ಅಕೋಲಾ: ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವಿನ ಜಗಳವು ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದ್ದು, ಒಬ್ಬ ಮೃತಪಟ್ಟು ಸುಮಾರು 10 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.

ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ಸಂಭವಿಸಿದ್ದು, ನಗರದ ಕೆಲವು ಭಾಗಗಳಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಹಾಗೂ ಜನರನ್ನು ಗುಂಪು ಗುಂಪಾಗಿ ಅಲೆದಾಡುವುದನ್ನುನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲು ಹಳೇ ನಗರದ ಹರಹರಪೇತ್‌ನಲ್ಲಿ ಸಣ್ಣ ವಿವಾದಕ್ಕೆ ಎರಡು ಗುಂಪುಗಳ ವಾಗ್ವಾದ ನಡೆದು ಘರ್ಷಣೆ ನಡೆದಿದೆ. ತರುವಾಯ, ಈ ಪ್ರದೇಶದಲ್ಲಿ ಹಲವಾರು ಜನರು ಜಮಾಯಿಸಿ ಕಲ್ಲು ತೂರಾಟ ನಡೆಸಿ ಹಲವಾರು ಕಾರು ಮತ್ತು ಬೈಕ್​ಗಳಿಗೆ ಬೆಂಕಿ ಹಚ್ಚಲಾಯಿತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಸ್ಥಳದಲ್ಲಿನ ಉದ್ವಿಗ್ನತೆ ಹಾಗೂ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net