More

  VIDEO| ಪಾದಚಾರಿಗಳ ಮೇಲೆ ಹರಿದ ಕಾರು; ಯುವತಿ ಮೃತ್ಯು, ನಾಲ್ವರು ಗಂಭೀರ

  ಮಂಗಳೂರು: ವೇಗವಾಗಿ ಬಂದ ಕಾರೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಓರ್ವ ಯುವತಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಲೇಡಿಹಿಲ್​ ಪ್ರದೇಶದಲ್ಲಿ ನಡೆದಿದೆ.

  ಅಪಘಾತದಲ್ಲಿ ಮೃತಪಟ್ಟವರನ್ನು ರೂಪಶ್ರೀ (23) ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಸ್ವಾತಿ( 26) ಹಿತನ್ವಿ(16) ಕೃತಿಕಾ( 16) ಯತಿಕಾ (12) ಎಂದು ಗುರುತಿಸಲಾಗಿದೆ. ಆರೋಪಿ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

  ಇದನ್ನೂ ಓದಿ: ಸಾಕಲು ಕಷ್ಟವಾಗುತ್ತಿದೆ ಎಂದು ಮಗನನ್ನು ಕೆರೆಗೆ ಎಸೆದು ಕೊಂದ ಕ್ರೂರಿ

  ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಫುಟ್​ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿರುವವರ ಮೇಲೆ ವೇಗವಾಗಿ ಬರುವ ಬಿಳಿ ಬಣ್ನದ ಕಾರೊಂದು ಏಕಾಏಕಿ ಪಾದಚಾರಿ ಮಾರ್ಗದ ಮೇಲೆ ಹರಿದಿದೆ. ಈ ವೇಳೆ ಓರ್ವ ಯುವತಿ ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಇದಾದ ಬಳಿಕ ಅಪಘಾತದ ಬಳಿಕ ಕಾರಿನ ಸಮೇತ ಪರಾರಿಯಾಗಿದ್ದ ಆರೋಪಿ ಕಮಲೇಶ್​ ಬಲ್​ದೇವ್ (57) ಬಳಿಕ ತನ್ನ ತಂದೆಯೊಂದಿಗೆ ಹತ್ತಿರದ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಮದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts