More

    10 ಕೃಪಾಂಕಕ್ಕೆ ಆಗ್ರಹ

    ಬೀದರ್: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ (ವಿದ್ಯುತ್/ಸಿವಿಲ್) ಹಾಗೂ ಕಿರಿಯ ಸಹಾಯಕ ಹುದ್ದೆಗಳ ಆಯ್ಕೆಗೆ 2022 ರ ಜುಲೈ 23 ರಂದು ನಡೆಸಿದ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕೋವಿಡ್ ಕಾರಣ 10 ಕೃಪಾಂಕ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
    ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ್ ಈ ಕುರಿತು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
    ಕೋವಿಡ್ ಕಾರಣ 2021 ರಲ್ಲಿ ಪರೀಕ್ಷೆ ನಡೆಸದೆ ಎಲ್ಲರನ್ನೂ ಪಾಸ್ ಮಾಡಲಾಗಿತ್ತು. 2022 ರಲ್ಲಿ 10 ಕೃಪಾಂಕ ನೀಡಲಾಗಿತ್ತು. ನೇಮಕಾತಿ ಪರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕದ 108 ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ 15 ಮಂದಿ ಹಾಗೂ 84 ಕಿರಿಯ ಎಂಜಿನಿಯರ್ ಹುದ್ದೆಗಳಿಗೆ 35 ಅಭ್ಯರ್ಥಿಗಳು ಮಾತ್ರ ಅರ್ಹರಾಗಿದ್ದಾರೆ. ಹೀಗಾಗಿ ಶೇ 80 ರಷ್ಟು ಅಭ್ಯರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ.
    ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಕನಿಷ್ಠ ಶೇ 35 ಅಂಕ ಗಳಿಸುವ ಹೊಸ ಷರತ್ತಿನ ಕಾರಣ ಈಗಾಗಲೇ ವಯೋಮಿತಿ ಮೀರುವ ಅಂಚಿನಲ್ಲಿರುವ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರ್ಹರ ನೇಮಕಾತಿಗಾಗಿ 10 ಕೃಪಾಂಕ ನೀಡಲು ನಿರ್ದೇಶನ ಕೊಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts