More

    ಗ್ರಾಹಕ 10 ಕೋಟಿ ರೂ. ಪರಿಹಾರ ಪಡೆಯಬಹುದು

    ಚಿತ್ರದುರ್ಗ: ವಂಚನೆಗೆ ಒಳಗಾಗಿ ನೊಂದ ಗ್ರಾಹಕರು ರಾಷ್ಟ್ರೀಯ ಗ್ರಾಹಕರ ಆಯೋಗದ ಮೂಲಕ 2 ಕೋಟಿ ರೂ. ನಿಂದ 10 ಕೋಟಿವರೆಗೂ ಪರಿಹಾರ ಪಡೆಯಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಎಚ್.ಎನ್. ಮೀನಾ ತಿಳಿಸಿದರು.

    ಜಿಲ್ಲಾಡಳಿತ, ಜಿಪಂ, ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ರಾಜ್ಯ ಗ್ರಾಹಕರ ಆಯೋಗದಲ್ಲಿ 50 ಲಕ್ಷ ರೂ.ನಿಂದ 2 ಕೋಟಿವರೆಗೂ, ಜಿಲ್ಲಾ ಆಯೋಗದಲ್ಲಿ 50 ಲಕ್ಷ ರೂ.ವರೆಗೂ ಪರಿಹಾರ ಪಡೆದುಕೊಳ್ಳಲು ಅವಕಾಶವಿದೆ. ವಂಚನೆಗೆ ಒಳಗಾದ ಗ್ರಾಹಕರು ತಾವಿರುವ ಅಥವಾ ಪ್ರತಿವಾದಿ ಇರುವ ಸ್ಥಳದಲ್ಲಿಯೂ ದೂರು ಸಲ್ಲಿಸಬಹುದು ಎಂದು ಸಲಹೆ ನೀಡಿದರು.

    ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ತಿಪ್ಪೇಸ್ವಾಮಿ ಮಾತನಾಡಿ, ಖರೀದಿಸುವ ಪ್ರತಿ ವಸ್ತುವಿಗೆ ಗ್ರಾಹಕರು ಕಡ್ಡಾಯವಾಗಿ ರಸೀದಿ ಪಡೆಯಬೇಕು. ಅಲ್ಲದೆ, ಪ್ರತಿಯೊಬ್ಬರೂ ಹಕ್ಕುಗಳ ಕುರಿತು ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಆಯೋಗದ ಸದಸ್ಯೆ ಬಿ.ಎಚ್.ಯಶೋಧಾ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ಕಾನೂನು ಮಾಪನಾಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎಂ.ಗುರುಪ್ರಸಾದ್, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಜಿಲ್ಲಾ ಸಂಯೋಜಕ ಬಿ.ಹನುಮಂತಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts