ಪ್ರಯಾಗ್ರಾಜ್: ಕಾರು ಹಾಗೂ ಬಸ್ (Bus-Car) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರದ ಮೆಜಾ ಪ್ರದೇಶದಲ್ಲಿ ನಡೆದಿದೆ.
ಮೃತರೆಲ್ಲರೂ ಛತ್ತೀಸ್ಗಢದ ಕೊರ್ಬಾ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್ರಾಜ್ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.
ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತರು ಛತ್ತೀಸ್ಗಢದ ಕೊರ್ಬಾ ಮೂಲದವರು ಎಂದು ತಿಳಿದು ಬಂದಿದ್ದು, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಕಾರಿನಲ್ಲಿ (Car) ತೆರಳುತ್ತಿದ್ದರು. ಬಸ್ ಮಧ್ಯಪ್ರದೇಶದ ರಾಜ್ಗಢದಿಂದ ತೆರಳುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಾಯಾಳುಗಳು ಸೂಕ್ತ ಚಿಕಿತ್ಸೆ ಕೊಡಿಸುವಂತೆ, ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಮತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.