More

    10 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ವಶ

    ಚಿಕ್ಕಮಗಳೂರು: ನಗರ ಬಸ್ ನಿಲ್ದಾಣದಲ್ಲಿ ಅಂಗಡಿಗಳ ಮೇಲೆ ಶನಿವಾರ ದಾಳಿ ನಡೆಸಿದ ನಗರಸಭಾ ಅಧಿಕಾರಿಗಳು 10 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡರು.

    ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ ಸಿಬ್ಬಂದಿ, ಅಂಗಡಿಗಳಲ್ಲಿ ಬಳಕೆ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ಕವರ್ ಇತರ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದುಕೊಂಡರು.
    ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಲಾಗಿದೆ. ಆದರೂ ಕೆಲವರು ಕಣ್ಣುತಪ್ಪಿಸಿ ಮಾರಾಟ ಮಾಡುತ್ತಿದ್ದಾರೆ. ನಗರದ ಕೆಲ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ದೂರುಗಳು ಬಂದಿದ್ದು ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
    ನಿಷೇಧಿತ ಪ್ಲಾಸ್ಟಿಕ್ ವ್ಯಾಪಾರ ಮಾಡುತ್ತಿರುವ ಅಂಗಡಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಪ್ಲಾಸ್ಟಿಕ್ ಬಳಕೆ ಮಾಡಿದರೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.
    ಸ್ವಚ್ಛತಾ ಮೇಲ್ವಿಚಾರಕರಾದ ಅಣ್ಣಯ್ಯ, ವಿವೇಕ್, ಹಿರಿಯ ಆರೋಗ್ಯ ನಿರೀಕ್ಷಕರಾದ ಕೆ.ಎಸ್.ಈಶ್ವರ್, ಶಶಿರಾಜ್, ವೆಂಕಟೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts