More

    ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿಹಿಡಿದ ಸುಪ್ರೀಂಕೋರ್ಟ್​

    ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್) ಶಿಕ್ಷಣ ಮತ್ತು ಉದ್ಯೋಗದಲ್ಲಿ ಕಲ್ಪಿಸಲಾಗಿರುವ ಶೇ.10 ಮೀಸಲಾತಿಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿ ಕುರಿತು ಇಂದು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶೇ.10 ಮೀಸಲಾತಿಯ​ನ್ನು ಎತ್ತಿಹಿಡಿದೆ. ಮೀಸಲಾತಿ ನೀಡಿರುವುದು ಸಂವಿಧಾನದ ಮೂಲ ರಚನೆಯ ಉಲ್ಲಂಘನೆಯಾಗುವುದಿಲ್ಲ ಎಂಬ ಮಹತ್ವದ ಆದೇಶ ಹೊರಡಿಸಿದೆ.

    ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್​ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಕೇಂದ್ರ ಸರ್ಕಾರ ನಿರ್ಧಾರವನ್ನು ಪುರಸ್ಕರಿಸಿದೆ. ಆದರೆ, ಐವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾದ ನ್ಯಾಯಮೂರ್ತಿ ರವೀಂದ್ರ ಭಟ್​ ಅವರು ಕೇಂದ್ರದ ಶೇ. 10 ಮೀಸಲಾತಿಯನ್ನು ವಿರೋಧಿಸಿದ್ದು, ಇದು ಅಸಂವಿಧಾನಿಕ ಎಂದು ತೀರ್ಪು ನೀಡಿದ್ದಾರೆ.

    ನ್ಯಾ. ರವೀಂದ್ರ ಭಟ್​ ಹೊರತುಪಡಿಸಿ, ಸಿಜೆಐ ಲಲಿತ್​, ನ್ಯಾ. ಜೆಬಿ ಪರ್ದೀವಾಲ, ನ್ಯಾ. ದಿನೇಶ್​ ಮಹೇಶ್ವರಿ ಹಾಗೂ ನ್ಯಾ. ಬೆಲ ಎಂ ತ್ರಿವೇದಿ ಅವರು ಇವಿಎಸ್​ ಮೀಸಲು ಸಿಂಧುತ್ವವನ್ನು ಎತ್ತಿಹಿಡಿದಿರುವುದರಿಂದ ಕೇಂದದ್ರ ನಿರ್ಧಾರಕ್ಕೆ ಗೆಲುವು ದೊರಕಿದೆ.

    2019ರ ಲೋಕಸಭಾ ಚುನಾವಣೆಗೂ ಮುನ್ನ ಸಂವಿಧಾನಕ್ಕೆ 103ನೇ ತಿದ್ದುಪಡಿ ತರುವ ಮೂಲಕ ಇಡಬ್ಲ್ಯುಎಸ್ ಮೀಸಲಾತಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿತ್ತು. ಇದರ ಸಿಂಧುತ್ವವನ್ನು ಪ್ರಶ್ನಿಸಿ 40 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇತರ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಟ್ಟಾರೆಯಾಗಿ ಇರುವ ಶೇ.50ರ ಮೀಸಲಾತಿಗೆ ಹೊರತಾಗಿ ಇಡಬ್ಲ್ಯುಎಸ್ ಕೋಟಾ ಕಲ್ಪಿಸಿರುವುದು ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ 103ನೇ ತಿದ್ದುಪಡಿಯನ್ನು ರದ್ದು ಮಾಡಬೇಕು ಎಂದು ಕೋರಲಾಗಿತ್ತು.

    ಇವಿಎಸ್​ ಮೀಸಲು, ಒಟ್ಟಾರೆ ಮೀಸಲಾತಿಯು ಶೇ. 50 ರನ್ನು ಮೀರಬಾರದು ಎಂಬ ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

    ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

    ಸಾನಿಯಾ-ಶೋಯೆಬ್​ ದಾಂಪತ್ಯದಲ್ಲಿ ಬಿರುಕು? ಅನುಮಾನಕ್ಕೆ ಕಾರಣವಾದ ಇನ್​ಸ್ಟಾಗ್ರಾಂ ಪೋಸ್ಟ್!​

    18 ಶಾಸಕರನ್ನು ಬಲೆಗೆ ಕೆಡವಿದ ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಹಣದ ವ್ಯವಹಾರ ಕಂಡು ದಂಗಾದ ಇಡಿ ಅಧಿಕಾರಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts