25.9 C
Bengaluru
Wednesday, January 22, 2020

ಕಾಂಗ್ರೆಸ್ ಸೋಲಿಗೆ ಹತ್ತುಹಲವು ಕಾರಣ; ಉಸ್ತುವಾರಿ ವರದಿಗೆ ನಾಯಕರ ನಡುಕ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು:  ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪಕ್ಷ ಅನುಭವಿಸಿದ ಹೀನಾಯ ಸೋಲಿಗೆ ಹತ್ತು ಕಾರಣಗಳನ್ನು ಪಟ್ಟಿ ಮಾಡಿ ಎಐಸಿಸಿಗೆ ಸಲ್ಲಿಸಿರುವ ಕಾಂಗ್ರೆಸ್ ಉಸ್ತುವಾರಿಗಳ ನಡೆ ರಾಜ್ಯ ನಾಯಕರನ್ನು ಬೆಚ್ಚಿಬೀಳಿಸಿದೆ. 15 ಕ್ಷೇತ್ರಗಳ ಉಪ ಚುನಾವಣೆಗಾಗಿ ನೆರೆ ರಾಜ್ಯಗಳಿಂದ ಒಂಬತ್ತು ನಾಯಕರನ್ನು ಎಐಸಿಸಿ ನೇಮಕ ಮಾಡಿತ್ತು. ಅವರೆಲ್ಲರೂ ಚುನಾವಣೆ ಮುಗಿಯುವ ತನಕ ಕ್ಷೇತ್ರದಲ್ಲಿದ್ದು, ಫಲಿತಾಂಶದ ನಂತರ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ವಿಸõತ ವರದಿ ಸಲ್ಲಿಸಿದ್ದಾರೆ. ಚುನಾವಣೆ ಕಣದಲ್ಲಿ ನಡೆದ ಪ್ರತಿ ಬೆಳವಣಿಗೆಗಳನ್ನು ದಾಖಲಿಸಿರುವ ಉಸ್ತುವಾರಿಗಳು ಪಕ್ಷಕ್ಕಾದ ಸೋಲಿಗೆ 10 ಪ್ರಮುಖ ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.

ಅದರ ಜತೆಗೆ ಪಕ್ಷ ಸಂಘಟನೆಗೆ ಆಗಬೇಕಾಗಿರುವ ಕ್ರಮಗಳೇನು ಎಂಬ ಅಂಶವನ್ನೂ ಶಿಫಾರಸು ಮಾಡಿದ್ದಾರೆಂದು ಕೆಪಿಸಿಸಿ ಮೂಲಗಳು ಖಚಿತಪಡಿಸಿವೆ. ಕೆಲ ಮುಖಂಡರ ಹೆಸರನ್ನು ಉಸ್ತುವಾರಿಗಳು ವರದಿಯಲ್ಲಿ ನೇರವಾಗಿ ಪ್ರಸ್ತಾಪಿಸಿಲ್ಲ ಎನ್ನಲಾಗಿದೆ.

ವರದಿ ಕೇಳಿತ್ತು: ಉಪಚುನಾವಣೆ ಫಲಿತಾಂಶ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಹಿರಿಯ ಮುಖಂಡರು ಒತ್ತಡ ಹೇರಿದ ಬೆಳವಣಿಗೆ ನಡೆದಾಗ ಎಐಸಿಸಿಯೇ ಕೆಪಿಸಿಸಿಯಿಂದ ವರದಿ ಕೇಳಿತ್ತು. ಆ ವರದಿ ಸಲ್ಲಿಕೆಗೆ ಮುನ್ನವೇ ಉಸ್ತುವಾರಿಗಳು ವರದಿ ನೀಡಿದ್ದಾರೆ.

ಶಿಫಾರಸುಗಳೇನು?

 • ಬೂತ್ ಮಟ್ಟದಿಂದ ಸಂಘಟನೆ ಬಲಪಡಿಸಬೇಕು
 • ಸದಸ್ಯತ್ವ ನೋಂದಣಿಗೆ ಪ್ರಮುಖ ಆದ್ಯತೆ ನೀಡಬೇಕು
 • ಗುಂಪುಗಾರಿಕೆಗೆ ಬ್ರೇಕ್ ಹಾಕಬೇಕು
 • ಎರಡನೇ ಹಂತದ ನಾಯಕತ್ವಕ್ಕೆ ಆದ್ಯತೆ ನೀಡದಿದ್ದರೆ ಕಷ್ಟ
 • ಹಿರಿಯ ನಾಯಕರು ಸಲಹೆಗಳನ್ನು ನೀಡಬೇಕು
 • ಪಕ್ಷದಿಂದ ದೂರವಾಗಿರುವ ಕಾರ್ಯಕರ್ತರನ್ನು ಮತ್ತೆ ಕರೆತರಬೇಕು
 • ಬ್ಲಾಕ್ ಮಟ್ಟದಿಂದ ಸಕ್ರಿಯ ಪದಾಧಿಕಾರಿಗಳನ್ನು ನೇಮಕ ಮಾಡಬೇಕು

ಉಸ್ತುವಾರಿಗಳು ಯಾರು?

ಆಂಧ್ರಪ್ರದೇಶದ ಮಾಜಿ ಶಾಸಕರಾದ ಎಸ್.ಎ. ಸಂಪತ್​ಕುಮಾರ್, ವಂಶಿ ಚಾಂದ್​ರೆಡ್ಡಿ, ಆಂಧ್ರದ ಮಾಜಿ ಸಂಸದರಾದ ಪೊನ್ನಂ ಪ್ರಭಾಕರ್, ಎನ್. ತುಳಸಿರೆಡ್ಡಿ, ಎಂ.ಎಂ. ಪಲ್ಲಂ ರಾಜು, ತಮಿಳುನಾಡಿನ ಮಾಜಿ ಸಂಸದ ವಿಶ್ವನಾಥನ್, ತಮಿಳುನಾಡಿನ ಕಾರ್ಯಾಧ್ಯಕ್ಷ ಮಯೂರ ಜಯಕುಮಾರ್, ಕೇರಳದ ಪಿಸಿಸಿ ಪ್ರಧಾನ ಕಾರ್ಯದರ್ಶಿ ಸಂಜೀವ್ ಜೋಸೆಫ್, ಕೇಂದ್ರದ ಮಾಜಿ ಸಚಿವ ಜೆ.ಡಿ. ಸೀಲಂ.

ಆಕಾಂಕ್ಷಿಗಳಿಗೆ ಆತಂಕ

ಉಸ್ತುವಾರಿಗಳ ಈ ವರದಿ ಹಲವು ಕಾಂಗ್ರೆಸ್ ನಾಯಕರನ್ನು ಆತಂಕಕ್ಕೆ ದೂಡಿದೆ. ವೈಯಕ್ತಿಕ ಕಾರಣ ದಿಂದ ಪಕ್ಷ ವಿರೋಧಿ ಕೆಲಸ ಮಾಡಿದ ಅನೇಕರು ಪ್ರಮುಖ ಹುದ್ದೆಗಳಿಗೆ ಪ್ರಯತ್ನ ನಡೆಸಿದ್ದಾರೆ. ಅಂತಹ ವರಿಗೆ ಈ ವರದಿ ಮುಳುವಾಗುವ ಸಾಧ್ಯತೆಗಳಿವೆ. ಹೈಕಮಾಂಡ್ ಸಹ ವರದಿಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಮೂಲಗಳು ಹೇಳಿವೆ.

10 ಕಾರಣಗಳು

 • ಪಕ್ಷದ ನಾಯಕರಲ್ಲಿನ ಒಗ್ಗಟ್ಟಿನ ಕೊರತೆ ಅತಿದೊಡ್ಡ ಸಮಸ್ಯೆ
 • ಚುನಾವಣಾ ಪೂರ್ವದ ಸಿದ್ಧತಾ ಸಭೆಗಳಲ್ಲಿ ನಾಯಕರು ಸಕ್ರಿಯವಾಗಿ ತೊಡಗಲಿಲ್ಲ
 • ಅಭ್ಯರ್ಥಿಗಳಿಗೆ ಸಂಪನ್ಮೂಲದ ಕೊರತೆ ಬಹಳವಾಗಿ ಕಾಡಿತು
 • ಚುನಾವಣಾ ಪ್ರಚಾರವನ್ನು ಸಂಘಟನಾತ್ಮಕವಾಗಿ ಮಾಡಲಿಲ್ಲ
 • ಅನೇಕ ಮುಖಂಡರು ಪ್ರಚಾರದಿಂದ ದೂರ ಉಳಿದು ನಿರಾಸಕ್ತಿ ತೋರಿದರು. ಮಾಧ್ಯಮಗಳಲ್ಲಿ ಅಪಪ್ರಚಾರಕ್ಕೆ ಕಾರಣರಾದರು
 • ಚುನಾವಣೆ ಹತ್ತಿರದಲ್ಲಿರುವಾಗ ಮತ್ತೆ ಮೈತ್ರಿ ಎನ್ನುವಂತಹ ಸರಣಿ ಹೇಳಿಕೆಗಳು ಸಾಕಷ್ಟು ತೊಂದರೆಯನ್ನುಂಟು ಮಾಡಿತು
 • ಕೆಲ ಮುಖಂಡರು ಜೆಡಿಎಸ್ ಜತೆ ಅತಿಯಾದ ಸ್ನೇಹವನ್ನು ತೋರ್ಪಡಿಸಿದರು.
 • ಜೆಡಿಎಸ್ ಜತೆ ಒಳಒಪ್ಪಂದ ಆಗಿದೆ ಎಂಬ ಭಾವನೆಯನ್ನು ಮುಖಂಡರೇ ಮಾಧ್ಯಮಗಳಲ್ಲಿ ಬಿತ್ತಿದರು.
 • ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷದ ಮುಖಂಡರೇ ಪ್ರಯತ್ನ ನಡೆಸಿದರು
 • ಜಿಲ್ಲಾ ಮಟ್ಟದಲ್ಲಿ ಇರುವ ಗುಂಪುಗಾರಿಕೆ ಹೋಗಲಾಡಿಸುವ ಪ್ರಯತ್ನ ನಡೆಯಲಿಲ್ಲ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...