More

    10 ರೂ. ನಾಣ್ಯವನ್ನು ನಿಷೇಧಿಸಿಲ್ಲ

    ಜಿಲ್ಲಾ ಲೀಡ್​ ಬ್ಯಾಂಕ್​ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷಾ ಸ್ಪಷ್ಟನೆ

    ಕೋಲಾರ: ಭಾರತೀಯ ರಿಸರ್ವ್​ ಬ್ಯಾಂಕ್​ನಿಂದ ಮುದ್ರಿಸಲಾಗಿರುವ 10 ರೂ. ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ನಿತ್ಯದ ವಹಿವಾಟಿನಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಸ್ಪಷ್ಟಪಡಿಸಿದರು.
    ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಲೀಡ್​ ಬ್ಯಾಂಕ್​ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 10 ರೂ. ನಾಣ್ಯಗಳನ್ನು ಆರ್​ಬಿಐ ನಿಷೇಧಿಸಿದೆ ಎಂದು ಕೆಲವರು ವದಂತಿಗಳನ್ನು ಹಬ್ಬಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ, ಆರ್​ಬಿಐ 10ರೂ. ನಾಣ್ಯಗಳನ್ನು ನಿಷೇಧಿಸಿಲ್ಲ. ಅಷ್ಟೇ ಅಲ್ಲ, ಚಲಾವಣೆಯನ್ನು ಹಿಂಪಡೆದಿಲ್ಲ. ಸಾರ್ವಜನಿಕರು ವದಂತಿಗಳನ್ನು ನಂಬದೆ 10 ರೂ. ನಾಣ್ಯಗಳನ್ನು ಸ್ವೀಕರಿಸಬಹುದು. ನಿಸ್ಸಂಶಯವಾಗಿ ಬಳಸಬಹುದಾಗಿದೆ ಎಂದು ಹೇಳಿದರು.
    ಜಿಲ್ಲಾ ಲೀಡ್​ ಬ್ಯಾಂಕ್​ ವ್ಯವಸ್ಥಾಪಕ ಎಸ್​.ಸುಧೀರ್​ ಮಾತನಾಡಿ, ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗದೆ 10 ರೂ. ನಾಣ್ಯಗಳನ್ನು ಬಳಸಬಹುದು. ಬ್ಯಾಂಕ್​ಗಳಲ್ಲಿ ಠೇವಣೆ ಮಾಡಬಹುದು. ಯಾರೇ ಆದರೂ 10 ರೂ. ನಾಣ್ಯಗಳನ್ನು ಸ್ವೀಕರಿಸದೆ ಇರುವುದು, ನಾಣ್ಯ ಕಾಯ್ದೆ 2011ರ ಸೆಕ್ಷನ್​ 6(1) ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲ ಬ್ಯಾಂಕ್​ಗಳು, ವ್ಯಾಪಾರಸ್ಥರು, ಸಾರ್ವಜನಿಕರು ರೂ.10 ನಾಣ್ಯಗಳನ್ನು ಭಯಮುಕ್ತವಾಗಿ ಸ್ವೀಕರಿಸಿ, ಅದನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.
    10ರೂ.ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್​ಬಿಐ ಹಲವು ಬಾರಿ ಈ ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಹೇಳಿದರು.
    ವಿವಿಧ ಬ್ಯಾಂಕ್​ಗಳ ವ್ಯವಸ್ಥಾಪಕರು, ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಖಲೀಲ್​ ಸಾಬ್​, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ್​, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಲೆಕ್ಕಾಧಿಕಾರಿ ಪಾಂಡುರಂಗನಾಯ್ಡು ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts