ರಾಮನಗರ: ಮಹಾತ್ಮಾಗಾಂಧಿ ಕಾಂಗ್ರೆಸ್ ಅಧಿವೇನದ ಅಧ್ಯಕ್ಷತೆ ವಹಿಸಿ 100 ವರ್ಷವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ನ 100 ಕಚೇರಿ ತೆರೆಯಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದಲ್ಲಿ ಭಾನುವಾರ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ, ಯುವ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಚೇರಿ ನಿರ್ವಣದ ಕಾರ್ಯಕ್ರಮಕ್ಕೆ ಅಡಿಗಲ್ಲು ಹಾಕಲು ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗುವುದು.
ಆನ್ಲೈನ್ ಮೂಲಕ ಅಡಿಗಲ್ಲು ಕಾರ್ಯಕ್ರಮ ನಡೆಯಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಹಾಗಾಗಿ ವಿಜಯನಗರದಲ್ಲಿ ಬೖಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ. ಯುದ್ಧದ ವಿಚಾರ ಇರುವುದರಿಂದ ನಾಯಕರ ಬಳಿ ರ್ಚಚಿಸಿ ತೀಮಾನ ತೆಗೆದುಕೊಳ್ಳಲಾಗುತ್ತದೆ. ಸಮಾವೇಶದಲ್ಲಿ 1 ಲಕ್ಷ ಗೊಲ್ಲರ ತಾಂಡಾದವರನ್ನು ಸೇರಿಸಿ ಅವರ ಮನೆಗಳಿಗೆ ದಾಖಲೆ ಪತ್ರ ವಿತರಣೆ ಮಾಡಲಾಗುತ್ತದೆ ಎಂದರು.