More

    ಇಂದಿರಾ ಕ್ಯಾಂಟೀನ್ ದುರಸ್ತಿ ನವೀಕರಣ, ನಿರ್ವಹಣೆಗೆ‌ 100 ಕೋಟಿ ರೂ. ಮೀಸಲು

    ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‌ ಬಲಪಡಿಸಲು ಮುಂದಾಗಿದ್ದು, ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಮಹತ್ವವನ್ನು ನೀಡಿದ್ದಾರೆ.

    ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟದ ಮೆನು ಬದಲಾವಣೆ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ ಬಿಬಿಎಂಪಿ ‌ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪುನರಾರಂಭ ಮಾಡಲು‌ ನಿರ್ಧಾರ ಮಾಡಲಾಗಿದೆ. ಎರಡನೇ ‌ಹಂತದಲ್ಲಿ ಎಲ್ಲಾ ಹೊಸ ಪಟ್ಟಣ ಹಾಗೂ ಬಿಬಿಎಂಪಿ ಹೊಸ ವಾರ್ಡ್​​​ಗಳಲ್ಲಿ ಕ್ಯಾಂಟೀನ್ ಆರಂಭ ಮಾಡುವುದಾಗಿ ಹೇಳಿದೆ. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ದುರಸ್ತಿ ನವೀಕರಣ ಹಾಗೂ ನಿರ್ವಹಣೆಗೆ‌100 ಕೋಟಿ ಮೀಸಲು ಇಡುವುದಾಗಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಮಂಡನೆ ಮಾಡಿದ್ದಾರೆ.

     ಇದನ್ನೂ ಓದಿ:  ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್​ಗೆ ತೀರ್ಮಾನ: ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

    2017ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್ ಭಾರೀ ಜನಪ್ರಿಯವಾಗಿತ್ತು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 175 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಇದು ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಗುಣಮಟ್ಟದ ಶುಚಿ-ರುಚಿ ಊಟ ನೀಡಲು ನಿರ್ಧಾರ ಮಾಡಲಾಗಿದೆ.

    ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ; ಬಿಯರ್​​ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts