blank

ಶಿಗ್ಗಾಂವಿಗೆ 100 ಕೋಟಿ ರೂ. ವಿಶೇಷ ಅನುದಾನ ಮಂಜೂರು

blank

ಶಿಗ್ಗಾಂವಿ: ರಾಜ್ಯ ಸರ್ಕಾರ ಶಿಗ್ಗಾಂವಿ ತಾಲೂಕಿಗೆ ನೂರು ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಸ್ಪಂದನ ಸಭೆಯಲ್ಲಿ ನಾಗರಿಕ ಸೌಲಭ್ಯ ಕೊರತೆ ದೂರುಗಳು ಅಧಿಕವಾಗಿವೆ. ಅವುಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂಬ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಕೋಟಿ ರೂ. ಮಂಜೂರು ಮಾಡಿದ್ದಾರೆ. ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿದ ಅಹವಾಲುಗಳನ್ನು ಪರಿಶೀಲಿಸಿ, ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಈಗಾಗಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಮಸ್ಥರ ಬೇಡಿಕೆಯಂತೆ ಶಿಗ್ಗಾಂವಿ ತಾಲೂಕಿನ ಬಿಸಲಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ನಿಲುಗಡೆ ಸೌಕರ್ಯ ಕಲ್ಪಿಸಲಾಗಿದೆ. ಹಾನಗಲ್ಲ ಮತ್ತು ಹುಬ್ಬಳ್ಳಿ ಘಟಕಗಳ ಬಸ್​ಗಳಿಗೆ ನಿಲುಗಡೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈಗ ಹಾನಗಲ್ಲ ಘಟಕದ ಬಸ್​ಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಹುಬ್ಬಳ್ಳಿ ಘಟಕದ ಬಸ್​ಗಳಿಗೂ ನಿಲುಗಡೆ ಕಲ್ಪಿಸಲು ಹಾವೇರಿ ಘಟಕದ ಅಧಿಕಾರಿಗಳು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾಲ್ಕು ತಂಡ ರಚನೆ ಮಾಡಿ ಅಬಕಾರಿ ದಾಳಿ ಆರಂಭಿಸಿದ್ದು, 13 ಪ್ರಕರಣ ದಾಖಲಿಸಿಕೊಂಡು 30 ಸಾವಿರ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಜನಸ್ಪಂದನ ಸಭೆಯಲ್ಲಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯ್ಕೆ ಧಕ್ಕೆ ತರುವಂಥ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಪುನಃ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Share This Article

ಬ್ರೆಡ್​​ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್​; ಇಲ್ಲಿದೆ ಸಿಂಪಲ್​ ವಿಧಾನ | Recipe

ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…

ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe

ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…

ಬಹಳ ಇಷ್ಟಪಟ್ಟು ಪನೀರ್​ ಸೇವಿಸುತ್ತಿದ್ದೀರಾ; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ವಿಷಯ ಇದು.. | Health Tips

ನಾನ್​ವೆಜ್​​​​​​ ಇಷ್ಟಪಡದವರು ಪ್ರೋಟೀನ್​ಗಾಗಿ ಪನೀರ್​​​​ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇದು ನಿಜವಾಗಿಯೂ ಪ್ರೋಟೀನ್‌ಗೆ ಉತ್ತಮವಾದ…