

ಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜ.7ರಂದು ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್ಡಿಎಂ ಆಂಗ್ಲ ಮಾಧ್ಯಮ (ಸಿಬಿಎಸ್ಇ) ಶಾಲೆ 14 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ತೇರ್ಗಡೆಯಾಗುವ ಮೂಲಕ ಶಾಲೆ ಶೇ.100 ಫಲಿತಾಂಶ ಪಡೆದಿದೆ. ಕನಿಷ್ಕ 461, ತಶ್ವಿ 431 ಹಾಗೂ ಹಿತ 429 ಅಂಕ ಗಳಿಸಿ ಡಿಸ್ಟೆಂಕ್ಷನ್, 7 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕ ರವಿಚಂದ್ರ ತರಬೇತಿ ನೀಡಿದ್ದಾರೆ. ಪ್ರಾಂಶುಪಾಲ ಮನ್ಮೋಹನ್ ನಾಯ್ಕ ಕೆ.ಜಿ.ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.