

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜು ಈ ಬಾರಿ ಶೇ.98.16 ಫಲಿತಾಂಶ ದಾಖಲಿಸಿ ಅದ್ವಿತೀಯ ಸಾಧನೆಗೈದಿದೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಿಂಚನಾ(593) ಅಂಕ ಪಡೆದು ರಾಜ್ಯಕ್ಕೆ 6ನೇ ಸ್ಥಾನಿಯಾಗಿದ್ದು, 592 ಅಂಕಗಳೊಂದಿಗೆ ದೀಕ್ಷಾ 7ನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಮೊದಲ ಎರಡು ಸ್ಥಾನಗಳನ್ನು ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ ವಿಭಾ ಕೆ.ಆರ್.(585) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಗಣ್ಯಶ್ರೀ(580) ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಶುಭಾ(569) ಪ್ರಥಮ ಮತ್ತು ಶ್ರವಣ(539) ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ 597 ವಿದ್ಯಾರ್ಥಿಗಳಲ್ಲಿ 586 ಮಂದಿ ಉತ್ತೀರ್ಣರಾಗಿದ್ದಾರೆ. 149 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 396 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 41 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗ ಶೇ.100, ವಿಜ್ಞಾನ ವಿಭಾಗ ಶೇ.97.93 ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.98.07 ಫಲಿತಾಂಶ ಲಭಿಸಿದೆ.