More

    ಐದು ಶಾಲೆಗಳಿಗೆ ಪ್ರತಿಶತ 100 ಫಲಿತಾಂಶ

    ಜಯಪುರ: ಮೇಗುಂದಾ ಹೋಬಳಿ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 241 ವಿದ್ಯಾರ್ಥಿಗಳಲ್ಲಿ 234 ಮಂದಿ ಉತ್ತೀರ್ಣರಾಗಿದ್ದಾರೆ. ಹೋಬಳಿಗೆ ಬಸರೀಕಟ್ಟೆ ಶ್ರೀ ಸದ್ಗುರು ಆಂಗ್ಲ ಮಾಧ್ಯಮ ಶಾಲೆ ಅಜಿತ್ ಎಚ್.ಸಿ. ಜೈನ್ 617 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾನೆ.

    ಹೋಬಳಿಯಲ್ಲಿ 4 ಸರ್ಕಾರಿ, 2 ಅನುದಾನಿತ ಹಾಗೂ 3 ಆಂಗ್ಲ ಮಾಧ್ಯಮ ಶಾಲೆಗಳಿವೆ. ಬಸರೀಕಟ್ಟೆಯ ಶ್ರೀ ಸದ್ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ 18 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.100 ಫಲಿತಾಂಶ ಲಭಿಸಿದೆ. ಕೆ.ಯು.ಸುಮೇಧಾ 608 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾಳೆ. ಕನ್ನಡ ಮಾಧ್ಯಮ ಶಾಲೆಗೆ ಶೇ.93.75 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 30 ಮಂದಿ ಉತ್ತೀರ್ಣರಾಗಿದ್ದಾರೆ. ನಾಗೇಂದ್ರ 588 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
    ಜಯಪುರ ಬಿಜಿಎಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 33 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅಮೂಲ್ಯ ಪಿ. ಶೆಟ್ಟಿ 590 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಎನ್.ಎಸ್.ಅನ್ವಿತಾ 587 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾಳೆ. ಬಿಜಿಎಸ್ ಕನ್ನಡ ಮಾಧ್ಯಮ ಶಾಲೆಗೆ ಶೇ.87.5 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 24 ವಿದ್ಯಾರ್ಥಿಗಳಲ್ಲಿ 21 ಮಂದಿ ಉತ್ತೀರ್ಣರಾಗಿದ್ದಾರೆ. ಬಿ.ಎಸ್.ಪೃಥ್ವಿಕ್ 546 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
    ಸಿಆರ್‌ಎಸ್‌ಬಿಸಿವಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, 35 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ಸ್ವರೂಪ್ ಹೊಳ್ಳ 598 ಅಂಕ, ಟಿ.ಎಸ್.ಶಶಾಂಕ್ 593 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ.
    ಹೇರೂರು ಸರ್ಕಾರಿ ಪ್ರೌಢಶಾಲೆ 49 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ. ಆರ್.ಧನ್ಯ 512 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ಜೆ.ಆರ್.ರಂಜಿತಾ 510 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ.
    ಅಗಳಗಂಡಿ ಸರ್ಕಾರಿ ಪ್ರೌಢಶಾಲೆಗೆ ಶೇ.94.11 ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ 17 ವಿದ್ಯಾರ್ಥಿಗಳಲ್ಲಿ, 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜೆ.ಆರ್.ಪ್ರೇಜಿ 533 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
    ಶಾಂತಿಗ್ರಾಮ ಸರ್ಕಾರಿ ಪ್ರೌಢಶಾಲೆಗೆ ಶೇ.94.11 ಫಲಿತಾಂಶ ಲಭಿಸಿದ್ದು, ಪರೀಕ್ಷೆ ಬರೆದ 17 ವಿದ್ಯಾರ್ಥಿಗಳಲ್ಲಿ 16 ಮಂದಿ ಉತ್ತೀರ್ಣರಾಗಿದ್ದಾರೆ. ಬಿ.ಪಿ.ಪವನ್ 557 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು, ರಜತ 538 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ. ಲೋಕನಾಥಪುರ ಸರ್ಕಾರಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎಸ್.ಸ್ವರೂಪ 522 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ, ಗಾಯನಾ 521 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts