More

    ತೌಕ್ತೆ ಚಂಡಮಾರುತಕ್ಕೆ ತತ್ತರಿಸಿದ ಗೋವಾ; ಈಗಾಗಲೇ 100ಕ್ಕೂ ಅಧಿಕ ಮನೆಗಳಿಗೆ ಹಾನಿ, 2 ಸಾವು; ಈ ಸಂಖ್ಯೆ ಹೆಚ್ಚುವ ಸಾಧ್ಯತೆ..!

    ಪಣಜಿ: ಕರ್ನಾಟಕ ಕರಾವಳಿಯಲ್ಲಿ ಪರಿಣಾಮ ತೋರಿರುವ ತೌಕ್ತೆ ಚಂಡಮಾರುತ ಗೋವಾದಲ್ಲಿ ಈಗಾಗಲೇ 100 ಮನೆಗಳಿಗೆ ಹಾನಿ ಮಾಡಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಲ್ಲಿನ ಮುಖ್ಯಮಂತ್ರಿಯೇ ಕಳವಳ ವ್ಯಕ್ತಪಡಿಸಿದ್ದಾರೆ.

    ಗೋವಾದಲ್ಲಿ ತೌಕ್ತೆ ಇದಾಗಲೇ ಅಲ್ಲೋಲಕಲ್ಲೋಲ ಎಬ್ಬಿಸಿದ್ದು, ನೂರಕ್ಕೂ ಅಧಿಕ ಮನೆಗಳು ಹಾನಿಗೀಡಾಗಿವೆ. ಮತ್ತೊಂದೆಡೆ ತೌಕ್ತೆಯ ಅಬ್ಬರಕ್ಕೆ ಇಬ್ಬರ ಪ್ರಾಣ ಹೋಗಿದೆ. ಚಂಡಮಾರುತದಿಂದಾಗಿ ಒಬ್ಬರ ಮೇಲೆ ಮರ ಉರುಳಿ ಬಿದಿದ್ದು, ಬೈಕ್​ನಲ್ಲಿ ಹೋಗುತ್ತಿದ್ದ ಇನ್ನೊಬ್ಬರ ಮೇಲೆ ವಿದ್ಯುತ್ ಕಂಬ ಬಿದ್ದಿದೆ, ಪರಿಣಾಮವಾಗಿ ಇಬ್ಬರೂ ಸಾವಿಗೀಡಾಗಿದ್ದಾರೆ. ಅಷ್ಟೇ ಅಲ್ಲದೆ ನೂರಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೊಂದೆಡೆ ಐನೂರಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಈ ಎಲ್ಲ ಅಂಕಿ-ಅಂಶಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

    ಸದ್ಯ ಗೋವಾದಲ್ಲಿ ವಿದ್ಯುಚ್ಛಕ್ತಿ ಕಡಿತಗೊಂಡಿದೆ, ಹಲವಾರು ರಸ್ತೆಗಳು ಮುಚ್ಚಿಹೋಗಿವೆ. ಇವೆಲ್ಲವನ್ನೂ ಸರಿಪಡಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ಅಗತ್ಯವಿದೆ. ಅಲ್ಲದೆ ನಾಳೆಯವರೆಗೂ ಭಾರಿ ಗಾಳಿ-ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್)

    ಸಾಯುವವನು ಎಲ್ಲಿ ಬೇಕಾದ್ರೂ ಸಾಯಲಿ, ನಾನು ಇಲ್ಲಿ ಕೋವಿಡ್ ಸೆಂಟರ್ ತೆರೆಯಲ್ಲ: ಬಿಜೆಪಿ ಶಾಸಕರ ಖಡಾಖಂಡಿತ ಮಾತು

    ಒಂದೇ ಮನೆಯ ನಾಲ್ವರು ಕರೊನಾಗೆ ಬಲಿ; 2- 3 ದಿನಗಳ ಅಂತರದಲ್ಲಿ ಇಬ್ಬಿಬ್ಬರ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts