More

    ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶದ ನಿರೀಕ್ಷೆ

    ಎನ್.ಆರ್.ಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದಿಂದ ಮುತ್ತಿನಕೊಪ್ಪ ಪ್ರೌಢಶಾಲೆಗೆ ಮೂರು ತಿಂಗಳ ಇಂಗ್ಲಿಷ್ ಟ್ಯೂಷನ್ ನೀಡಿರುವುದರಿಂದ ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುತ್ತಿನಕೊಪ್ಪ ಸರ್ಕಾರಿ ಪ್ರೌಢ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಎಂ.ಡಿ.ಪ್ರಕಾಶ್ ತಿಳಿಸಿದರು.
    ಸೋಮವಾರ ಮುತ್ತಿನಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದಿಂದ ಕಳೆದ ಮೂರು ತಿಂಗಳಿಂದ ನಡೆದ ಉಚಿತ ಇಂಗ್ಲಿಷ್ ಟ್ಯೂಷನ್ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ರಷ್ಟು ಅಂಕ ಪಡೆಯಬೇಕು ಎಂದು ಸಲಹೆ ನೀಡಿದರು.
    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೆಟ್ಟಿಕೊಪ್ಪ ವಲಯ ಮೇಲ್ವಿಚಾರಕ ಸತೀಶ್ ಮಾತನಾಡಿ, ಯೋಜನೆಯ ಜ್ಞಾನ ವಿಕಾಸ ಕೇಂದ್ರದಿಂದ ಮುತ್ತಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಮೂರು ತಿಂಗಳು ಉಚಿತವಾಗಿ ಇಂಗ್ಲಿಷ್ ವಿಷಯದಲ್ಲಿ ಟ್ಯೂಷನ್ ಕ್ಲಾಸ್ ಆಯೋಜಿಸಲಾಗಿತ್ತು. ಎಲ್ಲ ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿತಿದ್ದಾರೆ. ಇದರ ಜತೆಗೆ ಜ್ಞಾನವಿಕಾಸ ಕೇಂದ್ರದಿಂದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳ ವಿವಿಧ ಶಾಲೆಗಳಿಗೆ ಶಿಕ್ಷಕರ ನೇಮಕಾತಿ, ಬೆಂಚ್, ಡೆಸ್ಕ್ ವಿತರಣೆ, ಸುಜ್ಞಾನ ನಿಧಿ ಶಿಷ್ಯ ವೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
    ಶಿಕ್ಷಕಿ ರಂಜಿತಾ, ಮುತ್ತಿನಕೊಪ್ಪ ಒಕ್ಕೂಟದ ಅಧ್ಯಕ್ಷ ಸತೀಶ್, ಉಪಾಧ್ಯಕ್ಷೆ ಉಷಾ, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ರಂಜಿತಾ, ಸಹ ಶಿಕ್ಷಕ ಚಂದ್ರಪ್ಪ,ದೀಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts