ಕೆಎಂಇಎಸ್ ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

blm-1
Published on

ಕಾರ್ಕಳ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕುಕ್ಕುಂದೂರಿನ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ 77 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.100 ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.95 ಫಲಿತಾಂಶ ದಾಖಲಾಗಿದೆ. 77 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 43 ವಿದ್ಯಾರ್ಥಿಗಳು ಪ್ರಥಮ ದರ್ಜೆ, 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 585 ಅಂಕ ಪಡೆದ ಪೃಥ್ವಿ ಆಚಾರ್ಯ ಮತ್ತು ವಾಣಿಜ್ಯ ವಿಭಾಗದಲ್ಲಿ 588 ಅಂಕ ಪಡೆದ ಶ್ರೇಷ್ಠಾ ಕೆ. ಪ್ರಥಮ ಸ್ಥಾನಿಯಾದರೆ, 578 ಅಂಕ ಪಡೆದ ಅಂಬಿಕಾ ದಾಮೋದರ್ ಪಟಾಗರ್ ಮತ್ತು ಆಯೇಷಾ ಅಝ್ಮೀನಾ ದ್ವಿತೀಯ ಸ್ಥಾನಿಯಾಗಿದ್ದಾರೆ. ಸಾಧಕ ದ್ಯಾರ್ಥಿಗಳನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net