

ರಾಜ್ಯದಲ್ಲಿ ಇಂದು ಮಧ್ಯಾಹ್ನ 12ಗಂಟೆಯಿಂದ ಸಂಜೆ 5ಗಂಟೆವರೆಗೆ ಕೇವಲ ಒಂದು ಹೊಸ ಕೊವಿಡ್-19 ಪ್ರಕರಣ ಪತ್ತೆಯಾಗಿದ್ದು, ಸ್ವಲ್ಪ ನಿರಾಳವೆನಿಸಿದೆ. ಸೋಂಕಿತರ ಸಂಖ್ಯೆ 2283ಕ್ಕೆ ಏರಿದೆ.
ನಿನ್ನೆ ಸಂಜೆ 5ಗಂಟೆಯಿಂದ ಇಂದು ಮಧ್ಯಾಹ್ನ 12ಗಂಟೆಯವರೆಗೆ ಒಟ್ಟು 100 ಜನರಲ್ಲಿ ಕರೊನಾ ದೃಢಪಟ್ಟಿತ್ತು. ಇನ್ನು ಸಂಜೆಯಷ್ಟರಲ್ಲಿ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕ ಸಹಜವಾಗಿ ಉಂಟಾಗಿತ್ತು. ಆದರೆ ಒಂದೇ ಪ್ರಕರಣ ಪತ್ತೆಯಾಗಿದೆ. ಕಳೆದ 24ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 101 ಜನರಲ್ಲಿ ಕೊವಿಡ್-19 ಸೋಂಕು ಕಾಣಿಸಿಕೊಂಡಿದೆ.
ಇಂದು 43 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 748ಕ್ಕೆ ಏರಿದೆ. ಮರಣಹೊಂದಿದವರು 44 ಮಂದಿ. ಸಕ್ರಿಯ ಕರೊನಾ ಕೇಸ್ಗಳು 1489. ಹಾಗೇ 18 ಮಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಗರ, ಮಂಡ್ಯ, ಕಲಬುರಗಿ, ಬೆಳಗಾವಿ, ಯಾದಗಿರಿ, ದಾವಣಗೆರೆ, ಚಿಕ್ಕಬಳ್ಳಾಪುರ, ಹಾಸನ, ಉಡುಪಿ, ಬೀದರ್ ಜಿಲ್ಲೆಗಳು ಈಗಾಗಲೇ 100ರ ಗಡಿ ದಾಟಿ ಹೋಗಿವೆ. ಅದರಲ್ಲೂ ಬೆಂಗಳೂರು ನಗರ ಮತ್ತು ಮಂಡ್ಯದಲ್ಲಿ 250ಕ್ಕೂ ಹೆಚ್ಚು ಸೋಂಕಿತರು ಇದ್ದಾರೆ.
ಯಾವ ಜಿಲ್ಲೆಗಳಲ್ಲಿ ಎಷ್ಟು?