More

    ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಚಾಲನೆ ನೀಡಿದರು.

    ಕೆಂಪೇಗೌಡರ 511ನೇ ಜಯಂತ್ಯುತ್ಸವ ಕಾರ್ಯಕ್ರಮದ ಅಂಗವಾಗಿ ಇಂದು ನಾಡಪ್ರಭುವಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದನ್ನೂ ಓದಿರಿ ಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ

    ಸಿಎಂ ಯಡಿಯೂರಪ್ಪ ಮಾತನಾಡಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರು ನದಿ ಮೂಲ ಇಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳನ್ನು ಕಟ್ಟಿಸಿದರು. ಬೆಂಗಳೂರನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಾಣ ಮಾಡಿದರು. ವ್ಯಾಪಾರ ವಹಿವಾಟಿಗೆ ಚಿಕ್ಕಪೇಟೆ, ಬಳೇಪೇಟೆ ನಿರ್ಮಿಸಿದರು. ಬೆಂಗಳೂರನ್ನು ಯೋಜನಾಬದ್ಧವಾಗಿ ಬೆಳೆಸಲು ಕೆಂಪೇಗೌಡರ ಕೊಡುಗೆ ಅಪಾರ ಎಂದು ಬಣ್ಣಿಸಿದರು. ಒಂದು ವರ್ಷದ ಒಳಗಾಗಿ ಕಂಚಿನ ಪ್ರತಿಮೆ ನಿರ್ಮಾಣ ಆಗಲಿದೆ ಎಂದರು.

    ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆಇದೊಂದು ಅಭೂತಪೂರ್ವ ಕಾರ್ಯಕ್ರಮ. ಪಕ್ಷಭೇದವಿಲ್ಲದೇ ಎಲ್ಲರನ್ನೂ ಕಾರ್ಯಕ್ರಮಕ್ಕೆ ಕರೆದಿದ್ದಾರೆ. ಡಿಸಿಎಂ ಅಶ್ವಥನಾರಾಯಣ ಅವರು ಹೆಚ್ಚು ಉತ್ಸಾಹ ತೆಗೆದುಕೊಂಡು ಮಾಡ್ತಿದ್ದಾರೆ. ಅತೀ ಶೀಘ್ರವಾಗಿ ಕೆಲಸ ಆರಂಭ ಆಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಆಶಿಸಿದರು.

    ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮಾತನಾಡಿ, ದೇವನಹಳ್ಳಿಯ ಜನರನ್ನು ಯಾರು ಮರೆಯಲು ಸಾಧ್ಯವಿಲ್ಲ. ಈ ಭಾಗದ ರೈತರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಜನತೆಗೆ ಕೆಂಪೇಗೌಡರನ್ನು ಪರಿಚಯಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಯಡಿಯೂರಪ್ಪ ಅವರ ಈ ದೊಡ್ಡ ಕೆಲಸಕ್ಕೆ ಶುಭ ಹಾರೈಸುತ್ತೇವೆ ಎಂದರು.

    ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ನಟ ಪುನೀತ್​ರಾಜ್​ಕುಮಾರ್​, ಸಚಿವರು, ಗಣ್ಯರು ಉಪಸ್ಥಿತರಿದ್ದರು.

    ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts