More

    10ನೇ ತರಗತಿ ವಿದ್ಯಾರ್ಥಿಗಳ ಭೌತಿಕ ತರಗತಿ ರದ್ದು ; ಶಿಕ್ಷಕರ ಹಾಜರಾತಿಗೆ ವಿನಾಯಿತಿ

    ಬೆಂಗಳೂರು : ಕರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ಫ್ಯೂ ಜಾರಿ ಮಾಡಿರುವುದರಿಂದ ಶಿಕ್ಷಣ ಇಲಾಖೆಯು ಕೆಲವು ನಿಯಮಗಳನ್ನು ಬದಲು ಮಾಡಿದೆ. ಆ ಪ್ರಕಾರವಾಗಿ ಮೇ 4 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ರದ್ದು ಮಾಡಿ ಆನ್‍ಲೈನ್‍ನಲ್ಲಿ ಶಿಕ್ಷಣ ನೀಡಲು ಸೂಚಿಸಲಾಗಿದೆ.

    ಇನ್ನು 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನವನ್ನು ಏ.30ರೊಳಗೆ ನಿರ್ವಹಿಸಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಇದನ್ನು ಮಾರ್ಪಾಡು ಮಾಡಿರುವ ಶಿಕ್ಷಣ ಇಲಾಖೆ, ಏ.26ರೊಳಗೆಯೇ ಪೂರ್ಣಗೊಳಿಸುವಂತೆ ಸೂಚಿಸಿದೆ. ಉಳಿದ ಎಲ್ಲ ಶಿಕ್ಷಕರಿಗೂ ಮೇ 4 ರವರೆಗೆ ಶಾಲೆಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಿದೆ.

    ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಚಿತ್ರ ಅಳವಡಿಕೆ: ಸಾಫ್ಟ್‌ವೇರ್ ಇಂಜಿನಿಯರ್ ಬಂಧನ

    ಈ ಸಮಯದಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ಆನ್‍ಲೈನ್ ಮತ್ತು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳಿಗೆ ಕಷ್ಟ ಎನಿಸುವ ಅಂಶಗಳನ್ನು ಸುಲಭ ವಿಧಾನದಲ್ಲಿ ತಿಳಿಸಿಕೊಡುವಂತೆ ಶಿಕ್ಷಕರಿಗೆ ಸೂಚಿಸಿದೆ.

    ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಕರೊನಾ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ, ಶಿಕ್ಷಕರಿಗೆ ಸೂಚಿಸಿದ್ದಾರೆ.

    ರಾಜ್ಯದಲ್ಲಿ ಕರೊನಾ : 23,558 ಹೊಸ ಪ್ರಕರಣಗಳು; 116 ಸಾವು

    ದೇವಸ್ಥಾನದಲ್ಲಿ ಸಿಕ್ಕಿತು ಪೂಜಾರಿಗಳ ತಲೆ ಕಡಿದ ದೇಹ ! ಬೆಚ್ಚಿಬೀಳಿಸುತ್ತೆ ಈ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts