ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾ.11ರ ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುತ್ತಿದೆ. ಪ್ರಧಾನ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್. ಮರಡಿ ಉದ್ಘಾಟಿಸುವರು. ಡಿಸಿ ಟಿ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಎಸ್‌ಪಿ ರಂಜಿತ್‌ಕುಮಾರ್‌ಬಂಡಾರು ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಶ್ಮಿ ಅವರು ಉದ್ಯೋಗಸ್ಥ ಮಹಿಳೆಯರಲ್ಲಿ ಒತ್ತಡ ನಿರ್ವಹಣೆ ಕುರಿತು, ಸೈಬರ್ ಪೊಲೀಸ್ ಠಾಣೆ ಪಿಐ ವೆಂಕಟೇಶ್ ಮಹಿಳೆಯರಿಗಾಗಿ ಸೈಬರ್ ಸುರಕ್ಷತೆ ಕುರಿತು ಉಪನ್ಯಾಸ ನೀಡುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್. ಬಣಕಾರ್ ತಿಳಿಸಿದ್ದಾರೆ.
