More

    ದಸರಾಗೆ 11.74 ಲಕ್ಷ ರೂ. ಅನುದಾನ

    ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಶ್ರೀರೇಣುಕಾಂಬಾ ದೇವಿಯ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವವನ್ನು ವಿಽವತ್ತಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸರ್ಕಾರದಿಂದ 11.74 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಸಾಗರ ಉಪವಿಭಾಗಾಽಕಾರಿ ಪಲ್ಲವಿ ಸಾತೇನಹಳ್ಳಿ ತಿಳಿಸಿದರು.
    ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ದಸರಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಕರೆದಿದ್ದ ಪೂರ್ವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಅ.15ರಿಂದ 28ರವರೆಗೆ ವಿಜೃಂಭಣೆಯಿAದ ಅಮ್ಮನವರ ಶರನ್ನವರಾತ್ರಿ ಕಾರ್ಯಕ್ರಮ ನಡೆಯಲಿದೆ. ವಿಜಯದಶಮಿ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದೇ ಸೂರಿನಡಿ ನಡೆಯಬೇಕು. ಪ್ರತ್ಯೇಕವಾಗಿ ಉತ್ಸವ ಆಚರಿಸದೆ, ಗ್ರಾಮಸ್ಥರು, ಭಕ್ತರು ಒಗ್ಗೂಡಿ ಮಾದರಿಯಾಗಿ ಉತ್ಸವ ಆಚರಿಸಬೇಕು. ಇದಕ್ಕೆ ಸ್ಥಳೀಯ ಗ್ರಾಪಂ ಸಹಕಾರವೂ ಅಗತ್ಯ. ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರದಿಂದ 11.74 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದರು.
    9 ದಿನದ ದಸರಾ ಉತ್ಸವಕ್ಕೆ ವಿದ್ಯುತ್ ಅಡಚಣೆ ಆಗದಂತೆ ನೋಡಿಕೊಳ್ಳಬೇಕು. ತಾಲೂಕಿನ ಸುತ್ತಮುತ್ತ ಗ್ರಾಮಗಳಿಂದ ಬರುವ ಭಕ್ತರಿಗೆ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಸೌಲಭ್ಯ, ಶೌಚಗೃಹ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ದೇವಸ್ಥಾನ ಸಿಬ್ಬಂದಿಯ ಸಹಯೋಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
    ತಹಸೀಲ್ದಾರ್ ಹುಸೇನ್ ಸರಕಾವಸ್, ಶಿರಸ್ತೇದಾರ್ ಎಸ್.ನಿರ್ಮಲಾ, ಸಿಪಿಐ ಎಲ್.ರಾಜಶೇಖರ್, ಪಿಎಸ್‌ಐ ನಾಗರಾಜ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ, ಮಾಜಿ ಸದಸ್ಯ ಎನ್.ಜಿ.ನಾಗರಾಜ್, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ಎಂ.ಬಿ.ರೇಣುಕಾಪ್ರಸಾದ್, ಸದಸ್ಯ ಎಂ.ಪಿ.ರತ್ನಾಕರ, ದೇವಸ್ಥಾನದ ಆಡಳಿತಾಽಕಾರಿ ಶಿವಪ್ರಸಾದ್, ಮುಜರಾಯಿ ಇಲಾಖೆಯ ಲಲಿತಾ, ಶ್ರುತಿ, ಚಂದನ್, ಅರ್ಚಕ ಅರವಿಂದ ಭಟ್, ವೆಂಕಟೇಶ್, ಪ್ರವೀಣ್ ಮಿರ್ಜಿ, ಶಿವಶಂಕರಗೌಡ, ದೇವೇಂದ್ರಪ್ಪ, ಕಮಲಾಕ್ಷಿ ಸೇರಿದಂತೆ ವಿವಿಧ ಸಂಘ-ಸAಸ್ಥೆಯ ಪದಾಽಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts