ಪೇಂಟ್​ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 11 ಮಂದಿ ಸಜೀವ ದಹನ, ಹಲವರು ನಾಪತ್ತೆ

Fire Accident
Published on

ನವದೆಹಲಿ: ಪೇಂಟ್​ ತಯಾರಿಕಾ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಆಲಿಪುರದಲ್ಲಿ ನಡೆದಿದೆ.

ಘಟನೆಯು ಗುರುವಾರ ತಡೆರಾತ್ರಿ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್​ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ.  ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿದ್ದು, ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net