More

    ಭೂಷಣ್​ ಪ್ರಶಸ್ತಿ ಪ್ರದಾನ ಸಮಾರಂಭ; ಬಿಸಿಲಿನ ಝಳಕ್ಕೆ 11 ಜನರ ಮೃತ್ಯು

    ನವಿ ಮುಂಬೈ: ಭಾನುವಾರ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಭೂಷಣ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

    ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಯಾನೆ ಅವರಿಗೆ ಮಹಾರಾಷ್ಟ್ರ ಸರ್ಕಾರ ವತಿಯಿಂದ ಭೂಷಣ್​ ಪ್ರಶಸ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್​ ಷಾ ಪ್ರದಾನ ಮಾಡಿದ್ದರು.

    ಬಿಸಿಲಿನ ಝಳ

    ಭಾನುವಾರ ನವಿ ಮುಂಬೈನ ಖಾರ್​ಘರ್​ನಲ್ಲಿ ಸಮಾರಂಭ ನಡೆದಿದ್ದು ಈ ವೇಳೆ ತಾಪಮಾನ 38 ಡಿಗ್ರಿ ಇತ್ತು ಎಂದು ಹೇಳಲಾಗಿದೆ.

    ಇದನ್ನೂ ಓದಿ: ದೆಹಲಿ ಪಾಲಿಕೆ ಮೇಯರ್​-ಉಪಮೇಯರ್​​ ಚುನಾವಣೆ; ಅಭ್ಯರ್ಥಿಗಳನ್ನು ಘೋಷಿಸಿದ ಆಪ್​

    123ಕ್ಕೂ ಹೆಚ್ಚು ಜನ ಬಿಸಿಲಿನ ತಾಪವನ್ನು ತಾಳಲಾರದೆ ಅಸ್ವಸ್ಥರಾದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಲಾಯಿತು. ಈ ಪೈಕಿ 11 ಮಂದಿ ಮೃತಪಟ್ಟಿದ್ದು ಐವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ.

    ದುರದೃಷ್ಟಕರ

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಹಾರಅಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಇದು ದುರದೃಷ್ಟಕರವಾಗಿದ್ದು ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.

    ಈ ಕುರಿತು ಟ್ವೀಟ್​ ಮಾಡಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್ ಇದು ದುರದೃಷ್ಟಕರ ಘಟನೆಯಾಗಿದ್ದು ಮೃತರ ಕುಟುಂಬಕ್ಕೆದುಃಖ ಭರಿಸುವ ಶಕ್ತಿ ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ​ ಸಂತ್ರಸ್ತರನ್ನು ಖುದ್ದು ಮುಖ್ಯಮಂತ್ರಿಗಳು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದು ವೈದ್ಯರಿಗೆ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಸೂಚಿಸಿದ್ಧಾರೆ.

    Shinde

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts