ಕಾರ್​​, ಟ್ರಕ್​ ಮುಖಾಮುಖಿ ಡಿಕ್ಕಿ; ಮದುವೆಗೆ ಹೋಗುತ್ತಿದ್ದ 11 ಮಂದಿ ಮೃತ್ಯು

collide in Chhattisgarh
Published on

ಛತ್ತೀಸ್‌ಗಢ: ಕಾರ್​​ ಮತ್ತು ಟ್ರಕ್​ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಮದುವೆಗೆ ಹೋಗುತ್ತಿದ್ದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಲೋದ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ನಡೆದಿದೆ.

ಬುಧವಾರ ರಾತ್ರಿ ಟ್ರಕ್‌ಗೆ ಎಸ್‌ಯುವಿ ಕಾರ್​ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಸಂತ್ರಸ್ತರು ಕಂಕೇರ್ ಜಿಲ್ಲೆಯ ಮರ್ಕಟೋಲಾ ಗ್ರಾಮದಲ್ಲಿ ಮದುವೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರೆಲ್ಲರು ಧಮ್ತರಿ ಜಿಲ್ಲೆಯ ಸೋರಂ-ಭಟ್ಗಾಂವ್ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತಾಗಿ ಸಿಎಂ ಭೂಪೇಶ್ ಬಘೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹೀಂದ್ರಾ ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗುವೊಂದು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನ್ನ ವಾಹನವನ್ನು ಬಿಟ್ಟು ಪರಾರಿಯಾಗಿರುವ ಟ್ರಕ್ ಚಾಲಕನನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net