20.4 C
Bangalore
Monday, December 9, 2019

ಬ್ರೇಕ್​ ಫೇಲ್​ ಆಗಿ ಟ್ರಕ್​ಗೆ ಬಸ್​ ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು, 25 ಪ್ರಯಾಣಿಕರಿಗೆ ಗಾಯ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಡಬ್ಬಲ್​ ಡೆಕ್ಕರ್​ ಬಸ್​​ನ ಬ್ರೇಕ್​ ಫೇಲ್​ ಆಗಿ ಎದುರು ಬರುತ್ತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಸಾವಿಗೀಡಾಗಿ ಇತರೆ 25 ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಹಜಾರಿಬಾಘ್​ ಬಳಿಯ ರಾಷ್ಟ್ರೀಯ ಹೆದ್ದಾರಿ ಎರಡರಲ್ಲಿ ಸೋಮವಾರ ನಡೆದಿದೆ.

ಬಸ್​ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು. ಬಳಿಕ ಬ್ರೇಕ್​ ಫೇಲ್​ ಆಗಿರುವುದು ನಮ್ಮ ಗಮನಕ್ಕೆ ಬಂತು. ವೇಗವಾಗಿ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತರಲು ಚಾಲಕ ಪ್ರಯತ್ನಿಸುತ್ತಿದ್ದ. ಆದರೆ, ಬಸ್​ ಎದುರು ಬರುತ್ತಿದ್ದ ಟ್ರಕ್​ಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಬಸ್​ನ ಕೆಳಮಟ್ಟದ ಡೆಕ್​​ ಸಂಪೂರ್ಣವಾಗಿ ಹಾನಿಯಾಗಿ, ಕೆಲವು ಪ್ರಯಾಣಿಕರು ಬಸ್​ನಿಂದ ಹೊರಬಂದಿದ್ದರು ಎಂದು ಅಪಘಾತದ ತೀವ್ರತೆಯನ್ನು ಗಾಯಗೊಂಡ ಪ್ರಯಾಣಿಕ ಸೌರಭ್​ ಕುಮಾರ್​ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಬಸ್​ ಬ್ರೇಕ್​ ಫೇಲ್​ ಆಗಿದೆ. ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಬಸ್​ ಚಾಲಕ ಕೂಗಾಡುವುದನ್ನು ಕೇಳಿದೆ. ಚಾಲಕ ಮತ್ತು ನಿರ್ವಾಹಕ ಇಬ್ಬರು ಪ್ರಯಾಣಿಕರನ್ನು ಉಳಿಸಲು ಪ್ರಯತ್ನಿಸಿದರು. ಆದರೆ, ಅದು ಸಾಧ್ಯವಾಗಲಿಲ್ಲ. ಏಕೆಂದರೆ ವೇಗವಾಗಿ ಹೋಗುತ್ತಿದ್ದ ಬಸ್​ ನಿಲ್ಲಿಸಲು ಯಾವುದೇ ಅವಕಾಶ ಇರಲಿಲ್ಲ ಎಂದು ಮತ್ತೊಬ್ಬ ಗಾಯಗೊಂಡ ಪ್ರಯಾಣಿಕ ಹೇಳಿದ್ದಾರೆ.

ಗಾಯಗೊಂಡಿರುವ ಪ್ರಯಾಣಿಕರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಂಚಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಂಡದೊಂದಿಗೆ ನಾವು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದೆವು. ಘಟನಾ ಸ್ಥಳವನ್ನು ಕಪ್ಪು ಚುಕ್ಕೆ ಎಂದು ಘೋಷಣೆ ಮಾಡಲಾಗಿದೆ. ಏಕೆಂದರೆ ಇದೇ ಜಾಗದಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ ಅಪಘಾತಗಳಲ್ಲಿ ಸುಮಾರು 150 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಮನಿಶ್​ ಕುಮಾರ್​ ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಬಸ್ ಜಾರ್ಖಂಡ್​ನ ರಾಂಚಿಯಿಂದ ಪಟನಾ ಜಿಲ್ಲೆಯ​ ಮಸೌರಿ ಪ್ರದೇಶಕ್ಕೆ ಹೋಗುತ್ತಿತ್ತು. (ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...