ಭೀಕರ ರಸ್ತೆ ಅಪಘಾತ; ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತ್ಯು, 10ಕ್ಕೂ ಅಧಿಕ ಜನರಿಗೆ ಗಾಯ

Collides With Truck
Published on

ಛತ್ತೀಸ್​ಗಢ: ಪಿಕಪ್​ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಬಲೋದ ಬಜಾರ್-ಭಟಪರಾ ರಸ್ತೆಯ ಭಟಪರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಮಾರಿಯಾ ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮೃತರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಭಟಪರದ ಎಸ್‌ಡಿಒಪಿ ಸಿದ್ಧಾರ್ಥ್ ಬಾಘೇಲ್ ಈ ಮಾಹಿತಿ ನೀಡಿದ್ದಾರೆ.

ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದ ನಿವಾಸಿಗಳಾದ ಸಂತ್ರಸ್ತರು ಅರ್ಜುನಿ ಪ್ರದೇಶದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಬಲೋಡಾಬಜಾರ್‌ನ ಅರ್ಜುನಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ವೇಗವಾಗಿ ಬಂದ ಟ್ರಕ್ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ 11 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net