ನವದೆಹಲಿ: ನವದೆಹಲಿ (NewDelhi) ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 18ಕ್ಕೆ ಏರಿಕೆ ಆಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫೆಬ್ರವರಿ 15ರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದ್ದು, 12ಕ್ಖೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಹಿರಿಯ ಅಧಿಕಾರಿಯೊಬ್ಬರು, ಕಾಲ್ತುಳಿತದಲ್ಲಿ 10 ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದು, ಲೇಡಿ ಹಾರ್ಡಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಈ ಸಂಬಂಧ ರೈಲ್ವೆ ಇಲಾಖೆಯು ತನಿಖೆಗೆ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ
ನವದೆಹಲಿ ರೈಲು ನಿಲ್ದಾಣದಿಂದ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್ರಾಜ್ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ರೈಲಿಗಾಗಿ ಕಾಯುತ್ತಿದ್ದರು.
Not the India I dreamt of. Not the India which will go fukin crazy for a religious gathering. Not the India where Indians will die like cockroaches.
Absolutely disgusted by #NewDelhi station stampede. pic.twitter.com/kbiqUK8dmd
— Himanshu Shekhar (@HNImanshu) February 15, 2025
ಪ್ಲಾಟ್ಫಾರ್ಮ್ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ರೈಲುಗಳಿಗೆ ಹತ್ತಲು ಮುಂದಾದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ಎನ್ಡಿಆರ್ಎಫ್ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್ಡಿಆರ್ಎಫ್ ಮಾಹಿತಿ ನೀಡಿದೆ.
ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ಭಾರತೀಯರೊಂದಿಗೆ ಇದನ್ನು ಮಾತ್ರ… Champions Trophy ಹೊಸ್ತಿಲಲ್ಲೇ ಪಾಕ್ಗೆ ಖಡಕ್ ಸಂದೇಶ ರವಾನೆ
ಮುನಿಸು ಮರೆತು ಒಂದಾದ Harbhajan, Dhoni! Viral Video ನೋಡಿ ನೆಟ್ಟಿಗರು ಹೇಳಿದ್ದಿಷ್ಟು