More

    ಆಸ್ಪತ್ರೆಯಲ್ಲಿ ಮಲಗಿದ್ದ ವೈದ್ಯ, ಚಿಕಿತ್ಸೆ ಕೊಡಿ ಎಂದರೆ ನರ್ಸ್​ಗೆ ತೋರಿಸಿ ಎಂದ, ಬಾಲಕ ಸತ್ತೇ ಹೋದ!

    ದಾವಣಗೆರೆ: ಚಿಕಿತ್ಸೆ ಕೊಡಿ ಎಂದರೆ ನರ್ಸ್​ಗೆ ತೋರಿಸಿ ಎಂದು ವೈದ್ಯ ನಿರ್ಲಕ್ಷ್ಯ ತೋರಿದ್ದಕ್ಕೆ ಬಾಲಕ ಸಾವಿಗೀಡಾಗಿದ್ದಾನೆ ಎಂಬ ಆರೋಪವೊಂದು ಕೇಳಿಬಂದಿದೆ. ಈ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ ಎರಡೇ ದಿನದಲ್ಲಿ ಮತ್ತೊಂದು ವೈದ್ಯರ ನಿರ್ಲಕ್ಷ್ಯ ಪ್ರಕರಣ ವರದಿಯಾಗಿದೆ.

    ಮೊನ್ನೆ (ಜ.17) ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಇಂಥದ್ದೇ ಒಂದು ಪ್ರಕರಣ ನಡೆದಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಾವಣಗೆರೆ ನಿವಾಸಿ ಹನುಮಂತರಾವ್ (65) ಎಂಬವರನ್ನು ಆ್ಯಂಬುಲೆನ್ಸ್​ನಲ್ಲಿ ತರಲಾಗಿದ್ದರೂ, ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಸತಾಯಿಸಲಾಗಿದೆ. ಬಳಿಕ ಆ ವ್ಯಕ್ತಿ ಸಾವಿಗೀಡಾಗಿದ್ದು, ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು.

    ಇದನ್ನೂ ಓದಿ: ಸಮಯಕ್ಕೆ ತಕ್ಕ ಚಿಕಿತ್ಸೆ ಸಿಗದೆ ಉಸಿರುಗಟ್ಟಿ ಮೃತಪಟ್ಟ ವ್ಯಕ್ತಿ; ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ..

    ಇದೀಗ ಅದೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಹೊರಿಸಲಾಗಿದೆ. ಚನ್ನಗಿರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಬಾಲಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಪಾಲಕರು ಮತ್ತು ಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು.

    ಪಟ್ಟಣದ ಕುರುಬರ ಬೀದಿಯ ಭರತ್ (11) ಸಾವಿಗೀಡಾದ ಬಾಲಕ. ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಬೆಳಗಿನ ಜಾವ ಆಸ್ಪತ್ರೆಗೆ ಕರೆ ತರಲಾಯಿತು. ಆ ಸಂದರ್ಭದಲ್ಲಿ ರಾತ್ರಿ ಪಾಳಿಯ ವೈದ್ಯ ಮಲಗಿದ್ದರು ಎನ್ನಲಾಗಿದೆ. ಬಾಲಕನಿಗೆ ಚಿಕಿತ್ಸೆ ನೀಡುವಂತೆ ಕೇಳಲು ಹೋದಾಗ ಆ ವೈದ್ಯ ಎದ್ದು ಬರಲಿಲ್ಲ, ನರ್ಸ್‌ಗಳ ಬಳಿ ತೋರಿಸಿ ಎಂದು ಉತ್ತರ ನೀಡಿದ. ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಬಾಲಕ ಮೃತಪಟ್ಟ ಎಂದು ಸಂಬಂಧಿಕರು ಆರೋಪಿಸಿದರು.

    ಇದನ್ನೂ ಓದಿ: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಒಳಗಿದ್ದ ಮೂವರು ಪವಾಡಸದೃಶವಾಗಿ ಪಾರು

    ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪಾಲಕರು ಮತ್ತು ಸಂಬಂಧಿಕರು ಶವ ಇಟ್ಟು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ವೈದ್ಯ ಬರಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಆಕ್ರೋಶಗೊಂಡ ಪ್ರತಿಭಟನಾಕಾರರು ಆಸ್ಪತ್ರೆಯ ಗಾಜುಗಳನ್ನು ಪುಡಿ ಮಾಡಿದರು. ಸ್ಥಳಕ್ಕೆ ತಹಸೀಲ್ದಾರ್, ಸಿಪಿಐ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಮಧ್ಯಾಹ್ನದವರೆಗೂ ಪ್ರತಿಭಟನೆ ಮುಂದುವರಿದಿತ್ತು.

    ಎರಡೂ ಡೋಸ್ ಲಸಿಕೆ ಪಡೆದಿದ್ರೂ ಇಲ್ಲಿದೆ ಒಂದು ಆತಂಕಕಾರಿ ವಿಷಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts