More

    ಸರ್ದಾರ್​ ಪಟೇಲ್​ ಕ್ರಿಕೆಟ್​ ಸ್ಟೇಡಿಯಂ ಈಗ ನರೇಂದ್ರ ಮೋದಿ ಸ್ಟೇಡಿಯಂ..!

    ಅಹಮದಾಬಾದ್​: ಗುಜರಾತ್​ನ ಅಹಮದಾಬಾದ್​ನಲ್ಲಿರುವ ಸರ್ದಾರ್​ ವಲ್ಲಭ್‌ಭಾಯಿ ಪಟೇಲ್ ಕ್ರಿಕೆಟ್​ ಸ್ಟೇಡಿಯಂ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.

    ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಪಡೆದಿರುವ ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಅನ್ನು ಇಂದು (ಫೆ.24) ರಾಷ್ಟ್ರಪತಿ ರಾಮನಾಥ ಕೋವಿಂದ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಇದೇ ವೇಳೆ ಉಪಸ್ಥಿತರಿದ್ದರು.

    ಭಾರತದ ಟೆಸ್ಟ್ ಇತಿಹಾಸದಲ್ಲಿ ಹಲವು ಮಜಲುಗಳಿಗೆ ಸಾಕ್ಷಿಯಾಗಿರುವ ಮೊಟೆರಾ ಮೈದಾನ ಇದೀಗ ಮರುನಿರ್ಮಾಣಗೊಂಡು ಐತಿಹಾಸಿಕ ಕ್ಷಣಕ್ಕೆ ಸಜ್ಜಾಗಿದೆ. ಇಂದಿನಿಂದ ಆರಂಭವಾಗಲಿರುವ ಮೂರನೇ ಹಾಗೂ ಅಹರ್ನಿಶಿ ಟೆಸ್ಟ್ ಕದನದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡವನ್ನು ಆತಿಥೇಯ ಭಾರತ ಎದುರಿಸಲಿದೆ. ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಸ್ಟೇಡಿಯಂ ಅನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಸರ್ದಾರ್ ಪಟೇಲ್ ಸ್ಟೇಡಿಯಂ ಅನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಯಿತು.

    ಕಳೆದ ವರ್ಷ ಅಮೆರಿಕದ ಆಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಇದೇ ಮೊಟೆರಾ ಸ್ಟೇಡಿಯಂನಲ್ಲಿ ನಡೆದ ‘ನಮಸ್ತೆ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ಈ ಸ್ಟೇಡಿಯಂ 1.10 ಲಕ್ಷ ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ಆದರೆ ಈ ಬಾರಿ ಬಿಸಿಸಿಐ ಮಾರ್ಗಸೂಚಿಯಂತೆ ಶೇ. 50 ಅಂದರೆ 55 ಸಾವಿರ ಪ್ರೇಕ್ಷಕರು ಪಂದ್ಯ ವೀಕ್ಷಿಸಲಿದ್ದಾರೆ. 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದೊಂದಿಗೆ ಅತಿದೊಡ್ಡ ಸ್ಟೇಡಿಯಂ ಎಂದು ಹೆಸರಾಗಿದ್ದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ದಾಖಲೆಯನ್ನು ಈ ಕ್ರೀಡಾಂಗಣ ಹಿಂದಿಕ್ಕಿದೆ. ಕೋಲ್ಕತದ ಈಡನ್ ಗಾರ್ಡನ್ಸ್ ಈ ಹಿಂದೆ ಭಾರತದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವೆನಿಸಿತ್ತು.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts