More

    ಅಧಿಕಾರಿಗಳ ಮೇಲೆ ಕಲ್ಲು ತೂರಾಟ

    ಹುಕ್ಕೇರಿ: ತಾಲೂಕಿನ ಚಿಲಬಾವಿ ಪ್ರದೇಶದಲ್ಲಿ ಅಕ್ರಮ ಮರಳು ಸಂಗ್ರಹ ದಾಸ್ತಾನಿನ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಒಂದು ಲಾರಿ ವಶಕ್ಕೆ ಪಡೆದಿದ್ದಾರೆ. ಬಳಿಕ ಸಮೀಪದ ಮತ್ತೊಂದು ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸುವಾಗ ಅಕ್ರಮ ದಂಧೆಕೋರರ ಗುಂಪು ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದರಿಂದ ವಾಹನದ ಗಾಜು ಪುಡಿಯಾದ ಘಟನೆ ಸಂಭವಿಸಿದೆ. ತಾಲೂಕಿನ ಹಿಡಕಲ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಸಂಗ್ರಹವಾಗುವ ಮರಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ, ಮರಳು ಸಂಗ್ರಹಿಸುತ್ತಿದ್ದ 20 ಜನರ ಗುಂಪು ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜೀವಭಯದಿಂದ ಅಧಿಕಾರಿಗಳು ಅಲ್ಲಿಂದ ಹಿಂದುರುಗಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಹಾಗೂ ಸರ್ಕಾರಿ ಆಸ್ತಿ ಹಾನಿ ಮಾಡಿದ ಹಿನ್ನೆಲೆಯಲ್ಲಿ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಕ್ರಮ ಮರಳು ಸಂಗ್ರಹಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಜಾಮೀನು ರಹಿತ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ.
    | ಡಾ.ಡಿ.ಎಚ್.ಹೂಗಾರ ತಹಸೀಲ್ದಾರ್, ಹುಕ್ಕೇರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts