ಹಾವೇರಿ: ಜಿಲ್ಲೆಯಲ್ಲಿ ಭಾನುವಾರ 114 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 90 ಜನರು ಗುಣವಾಗಿದ್ದಾರೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ತಿಳಿಸಿದ್ದಾರೆ. ಈವರೆಗೆ 9,220 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇಂದಿನವರೆಗೆ 7713 ಜನರು ಸೋಂಕಿನಿಂದ ಗುಣವಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ 172 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. 1335 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 617 ಸೋಂಕಿತರು ಹೋಂ ಐಸೋಲೇಷನ್ನಲ್ಲಿ ಹಾಗೂ 298 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್ಹೆಲ್ತ್ ಸೆಂಟರ್, ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬ್ಯಾಡಗಿಯಲ್ಲಿ 25, ಹಾನಗಲ್ಲ 8, ಹಾವೇರಿ 26, ಹಿರೇಕೆರೂರ 18, ರಾಣೆಬೆನ್ನೂರ 36, ಶಿಗ್ಗಾಂವಿ 1 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಗುಣವಾಗಿ ಭಾನುವಾರ ಬ್ಯಾಡಗಿಯಿಂದ 15, ಹಾನಗಲ್ಲ 4, ಹಿರೇಕೆರೂರ 12, ರಾಣೆಬೆನ್ನೂರ 22, ಸವಣೂರ 14, ಶಿಗ್ಗಾಂವಿ 23 ಜನರು ಬಿಡುಗಡೆ ಹೊಂದಿದ್ದಾರೆ. ಹಿರೇಕೆರೂರು ತಾಲೂಕಿನ ಬಾಳಂಬೀಡ ಗ್ರಾಮದ 74 ವರ್ಷದ ವೃದ್ಧ ಮೃತಪಟ್ಟಿದ್ದು, ಕೋವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.
114 ಜನರಿಗೆ ಪಾಸಿಟಿವ್, 90 ಜನ ಗುಣ
You Might Also Like
ಪಿತ್ತಕೋಶದ ಕಲ್ಲು; ಸಮಸ್ಯೆ ತಪ್ಪಿಸಲು ಈ ಪದಾರ್ಥಗಳಿಂದ ದೂರವಿರಿ | Health Tips
ಮೂತ್ರಪಿಂಡದಲ್ಲಿ ಮಾತ್ರ ಕಲ್ಲುಗಳಾಗುತ್ತದೆ ಎಂದು ನೀವು ಭಾವಿಸುತ್ತೀರಾ? ನೀವು ಹಾಗೆ ಭಾವಿಸಿದರೆ ಅದು ತಪ್ಪು. ಏಕೆಂದರೆ…
30-40ನೇ ವಯಸ್ಸಿನಲ್ಲಿ ಜೀವನವನ್ನು ಹೇಗೆ ನಡೆಸಬೇಕು; ವೃದ್ಧಾಪ್ಯದ ಮೇಲೆ ಬೀರುವ ಪರಿಣಾಮದ ಡೀಟೇಲ್ಸ್ ಇಲ್ಲಿದೆ | Health Tips
ಪ್ರೌಢವಸ್ಥೆ ಮತ್ತು ಯೌವನದಲ್ಲಿ ದೇಹವು ಉತ್ತಮ ಸ್ಥಿತಿಯಲ್ಲಿರುತ್ತದೆ. ಪ್ರತಿಯೊಂದು ಸ್ನಾಯು ಮತ್ತು ಅಂಗವು ಶಕ್ತಿಯಿಂದಿರುತ್ತದೆ. ಈ…
Night Shift Work : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದೀರಾ?ಹಾಗಿದ್ರೆ ಈ ಸುದ್ದಿ ನಿಮಗಾಗಿ..
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಕಚೇರಿಗಳಲ್ಲಿ ರಾತ್ರಿ ಪಾಳಿಯಲ್ಲಿ (Night Shift Work) ಕೆಲಸ ಮಾಡುತ್ತಿದ್ದಾರೆ.…