ಕಲ್ವರ್ಟ್​ಗೆ ಡಿಕ್ಕಿ ಹೊಡೆದ Bus​; 12 ಮಂದಿ ಸಾವು, 36ಕ್ಕೂ ಅಧಿಕ ಜನರಿಗೆ ಗಾಯ

Bus Accident
Published on

ಜೈಪುರ: ಖಾಸಗಿ ಬಸ್​ (Bus) ಒಂದು ಚಾಲಕನ ನಿಯಂತ್ರಣ ಕಲ್​ವರ್ಟ್​ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮೃತಪಟ್ಟು, 36ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ರಾಜಸ್ಥಾನದ ಸಿಕಾರ್​ ಜಿಲ್ಲೆಯಲ್ಲಿ ನಡೆದಿದೆ.

ಸಲಾಸರ್‌ನಿಂದ ಲಕ್ಷ್ಮಣಗಢಕ್ಕೆ ಬರುತ್ತಿದ್ದ ಖಾಸಗಿ ಬಸ್‌ವೊಂದು ತಿರುವು ತೆಗೆದುಕೊಳ್ಳುವಾಗ ಕಲ್​ವರ್ಟ್​ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಸಲಾಸರ್‌ನಿಂದ ಲಕ್ಷ್ಮಣಗಢದತ್ತ ತೆರಳುತ್ತಿದ್ದ ಬಸ್​ ಸಿಕಾರ್​ ಬಳಿ ತಿರುವು ತೆಗೆದುಕೊಳ್ಳುವಾಗ ಕಲ್​ವರ್ಟ್​ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಘಟನೆ 12 ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ 36ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಗಾತಾಳುಗಳನ್ನು ಲಕ್ಷ್ಮಣಗಢ ಮತ್ತು ಸಿಕಾರ್​ನ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net