More

    ಪಾಕಿಸ್ತಾನ ಚುನಾವಣೆ: ಬಲೂಚಿಸ್ತಾನದಲ್ಲಿ ಬಾಂಬ್​​ ಸ್ಫೋಟ 12 ಸಾವು

    ಬಲೂಚಿಸ್ತಾನ: ಪಾಕಿಸ್ತಾನದಲ್ಲಿ ಚುನಾವಣೆ ವೇಳೆ ಬಾಂಬ್​​​​ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್‌ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಇಂದು (ಬುಧವಾರ) ಬಾಂಬ್​​ ಸ್ಫೋಟಗೊಂಡಿದ್ದು, ಹನ್ನೆರಡು ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ:U19 ವಿಶ್ವಕಪ್: ಗೆಲುವಿನ ಹಿಂದಿನ ರಹಸ್ಯ ತಿಳಿಸಿದ ಟೀಂ ಇಂಡಿಯಾ ನಾಯಕ ಉದಯ್!

    ಪಾಕಿಸ್ತಾನ ಬಲೂಚಿಸ್ತಾನ ಪಿಶಿನ್‌ ಜಿಲ್ಲೆಯ ಖನೋಜೈ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಕಚೇರಿಯ ಹೊರಗೆ ಬಾಂಬ್​​​ ಸ್ಫೋಟ ಸಂಭವಿಸಿದೆ. ಇನ್ನು ಸ್ಫೋಟದ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರು ತಮ್ಮ ಕಚೇರಿಯಲ್ಲಿ ಇರಲಿಲ್ಲ ಎಂದು ಪಂಗೂರ್‌ನ ಹಿರಿಯ ಪೊಲೀಸ್ ಅಧಿಕಾರಿ ಅಬ್ದುಲ್ಲಾ ಜೆಹ್ರಿ ಹೇಳಿದ್ದಾರೆ.

    ಅಭ್ಯರ್ಥಿಯ ಚುನಾವಣಾ ಕಚೇರಿಯ ಹೊರಗೆ ಬ್ಯಾಗ್‌ನಲ್ಲಿ ಬಾಂಬ್ ಇಡಲಾಗಿತ್ತು ಮತ್ತು ನಂತರ ರಿಮೋಟ್ ಟೈಮರ್ ಮೂಲಕ ಸ್ಫೋಟಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಈ ಘಟನೆಯ ಕುರಿತು ಪಾಕಿಸ್ತಾನದ ಚುನಾವಣಾ ಆಯೋಗವು ಪ್ರಾಂತೀಯ ಮುಖ್ಯ ಕಾರ್ಯದರ್ಶಿ ಮತ್ತು ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ತಕ್ಷಣದ ವರದಿಗಳನ್ನು ಕೇಳಿದೆ.

    ಭಾನುವಾರದಿಂದ ಈ ಪ್ರಾಂತ್ಯದಲ್ಲಿ ಸುಮಾರು 50 ದಾಳಿಗಳು ನಡೆದಿವೆ. ಸಿಬಿ ಟೌನ್‌ನಲ್ಲಿ ನಡೆದ ಒಂದು ಘಟನೆಯಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಬೆಂಬಲಿತ ರಾಷ್ಟ್ರೀಯ ಅಸೆಂಬ್ಲಿ ಅಭ್ಯರ್ಥಿಯ ಚುನಾವಣಾ ರ್‍ಯಾಲಿಯನ್ನು ಗುರಿಯಾಗಿಸಿಕೊಂಡು ದಾಳಿಕೋರರು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಆರು ಮಂದಿ ಗಾಯಗೊಂಡಿದ್ದರು.

    ಈ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ನೀಡಲಾಗಿದೆ ಎಂದು ಹೇಳಲಾಗಿದೆ. ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಮೋಟಾರ್‌ ಬೈಕ್‌ನಲ್ಲಿ ಬಾಂಬ್ ಇಡಲಾಗಿತ್ತು ಎಂದು ಜಿಲ್ಲಾಧಿಕಾರಿ ಜುಮಾ ದಾದ್ ತಿಳಿಸಿದ್ದಾರೆ.

    ಸ್ಫೋಟದಲ್ಲಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೆರದುಕೊಂಡು ಹೋಗಲಾಗಿದೆ. ಬಲೂಚಿಸ್ತಾನದ ಗೃಹ ಮತ್ತು ಬುಡಕಟ್ಟು ವ್ಯವಹಾರಗಳ ಉಸ್ತುವಾರಿ ಸಚಿವ ಮಿರ್ ಜುಬೇರ್ ಖಾನ್ ಜಮಾಲಿ ಸಾವು ಮತ್ತು ಗಾಯಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಧಿಕಾರಿಯಿಂದ ವರದಿಯನ್ನು ಕೇಳಿದ್ದಾರೆ.

    5 ಕೋಟಿ ಕೊಟ್ಟರೆ ಸಿನಿಮಾ ಮಾಡ್ತೀನಿ ಎಂದ ಕೊಡಗಿನ ಕುವರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts