More

    ತುಟ್ಟಿಭತ್ಯೆ ಹೆಚ್ಚಳ; 12 ಲಕ್ಷ ಕುಟುಂಬದ ವೇತನ/ಪಿಂಚಣಿಯಲ್ಲಿ ಪರಿಷ್ಕರಣೆ

    ಬೆಂಗಳೂರು: ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದ ಬೆನ್ನಿಗೆ ರಾಜ್ಯ ಸರ್ಕಾರವೂ ತನ್ನ ನಿರ್ಧಾರ ಪ್ರಕಟಿಸಿದೆ.
    2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.38.75ರಿಂದ ಶೇ.42.50ಕ್ಕೆ ಪರಿಷ್ಕರಿಸಿ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಲಾಗುತ್ತದೆ.
    ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಜ.1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗುತ್ತಿದೆ.
    ಅಲ್ಲದೆ ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಈ ಆದೇಶ ಅನ್ವಯವಾಗುವುದು. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಟ್ ನೌಕರರಿಗೆ, ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿನ ಪೂರ್ಣಾವಧಿ ನೌಕರರಿಗೆ ಈ ತೀರ್ಮಾನ ಅನ್ವಯವಾಗುವುದು.
    ಒಟ್ಟಾರೆ ಅಂದಾಜು 5.20 ಲಕ್ಷ ಸರ್ಕಾರಿ ನೌಕರರು, 4.60 ಲಕ್ಷ ನಿವೃತ್ತ ನೌಕರರು, 2.50 ಲಕ್ಷ ನಿಗಮ, ಮಂಡಳಿ, ವಿಶ್ವವಿದ್ಯಾಲಯ ಸಿಬ್ಬಂದಿ ಸೇರಿದಂತೆ ಒಟ್ಟಾರೆ 12 ಲಕ್ಷ ಮಂದಿಗೆ ಈ ತೀರ್ಮಾನದಿಂದ ಅನುಕೂಲವಾಗಲಿದೆ.

    2024ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರುವಂತೆ ತುಟ್ಟಿಭತ್ಯೆ ಹೆಚ್ಚಿಸಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು. ನಮ್ಮ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನೌಕರರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts