More

    ಛತ್ತೀಸ್​ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ, 12 ಮಾವೋವಾದಿಗಳ ಹತ್ಯೆ

    ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ತಿಳಿಸಿದ್ದಾರೆ.

    ಇದನ್ನೂ ಓದಿ: ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಸಿಎಂ ಅರವಿಂದ್ ಕೇಜ್ರಿವಾಲ್​​​ ಮೊದಲ ಪ್ರತಿಕ್ರಿಯೆ?

    ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದುವರೆಗೆ 12 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    “ಗಂಗಲೂರು ಪ್ರದೇಶದಲ್ಲಿ ಗುಂಡಿನ ಚಕಮಕಿ ಕೊನೆಗೊಂಡಿದೆ. ಇದುವರೆಗೆ ನಡೆದ ಕಾರ್ಯಚರಣೆಯಲ್ಲಿ ಹತರಾದ 12 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭದ್ರತಾ ಪಡೆಗಳ ಮಹತ್ವದ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಅಭಿನಂದಿಸಿದ್ದಾರೆ.

    ಕಳೆದ ಒಂದು ತಿಂಗಳಲ್ಲಿ ಛತ್ತೀಸ್‍ಗಢದಲ್ಲಿ ನಕ್ಸಲರ ಇದು ಮೂರನೇ ದೊಡ್ಡ ಹೊಡೆತವಾಗಿದೆ. ಏ.16 ರಂದು, ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಕನಿಷ್ಠ 29 ಮಾವೋವಾದಿಗಳು ಮೃತಪಟ್ಟಿದ್ದರು. ಏ.30 ರಂದು ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಮತ್ತೊಂದು ಎನ್‍ಕೌಂಟರ್‌ನಲ್ಲಿ 10 ಮಾವೋವಾದಿಗಳು ಹತರಾಗಿದ್ದರು.

    ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 103 ಮಾವೋವಾದಿಗಳು ಹತರಾಗಿದ್ದಾರೆ.

    SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts