

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತಕ್ಕೆ ಅಕ್ರಮ ಪ್ರವೇಶ: ಇಬ್ಬರು ಚೀನಾ ಪ್ರಜೆಗಳ ಬಂಧನ!
ರಾತ್ರಿಯಿಡೀ ಸುರಿದ ಭಾರೀ ಮಳೆಗೆ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯ ರಭಸಕ್ಕೆ ಮನೆಗಳು ಕುಸಿದು ಬಿದ್ದಿದ್ದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಹಲವು ಪ್ರದೇಶಗಳಲ್ಲಿ ಇಂದು ಮಧ್ಯಾಹ್ನವೂ ಮಳೆ ಮುಂದುವರೆದಿದೆ.
ಹರಿದ್ವಾರ ಜಿಲ್ಲೆಯಲ್ಲಿ 6 ಮಂದಿ, ತೆಹ್ರಿ ಜಿಲ್ಲೆಯಲ್ಲಿ 3, ಡೆಹ್ರಾಡೂನ್ 2 ಮತ್ತು ಚಮೋಲಿಯಲ್ಲಿ 1 ಒಬ್ಬರು ಮೃತಪಟ್ಟಿದ್ದಾರೆ. ಮಳೆ ಅವಘಡದಲ್ಲಿ ಆರು ಮಂದಿ ಗಾಯಗೊಂಡಿದ್ದು, ಹಲ್ದ್ವಾನಿ ಮತ್ತು ಚಮೋಲಿಯಲ್ಲಿ ತಲಾ ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿಯಂತ್ರಣ ಕೊಠಡಿ ತಿಳಿಸಿದೆ.
ಭೀಮಾಲಿ ಚೌಕಿ ಬಳಿಯ ರಸ್ತೆ ಕೊಚ್ಚಿಕೊಂಡು ಹೋಗಿದ್ದು, 200 ಯಾತ್ರಾರ್ಥಿಗಳು ಕೇದರನಾಥ ಮಾರ್ಗದಲ್ಲಿ ಸಿಲುಕಿಕೊಂಡಿದ್ದರು. ಎಲ್ಲರನ್ನೂ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಉಳಿದವರನ್ನು ಹೆಲಿಕಾಪ್ಟರ್‌ಗಳ ಸಹಾಯದಿಂದ ರಕ್ಷಿಸುವ ಪ್ರಕ್ರಿಯೆ ನಡೆಯುತ್ತಿದೆ ವಿಪತ್ತು ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ಎಂದರು.
ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ರಾಜ್ಯಾದ್ಯಂತ ಪರಿಸ್ಥಿತಿ ಅವಲೋಕಿಸಿದ್ದು, ಅಧಿಕಾರಿಗಳು ಜಾಗರೂಕರಾಗಿರಲು ಸೂಚಿಸಿದ್ದಾರೆ. ''ರಾಜ್ಯದಾದ್ಯಂತ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾದಿತ ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.