ಫುಟ್​ಬಾಲ್​ ಪಂದ್ಯದ ವೇಳೆ ಭೀಕರ ಕಾಲ್ತುಳಿತ: 12 ಸಾವು, 500ಕ್ಕೂ ಹೆಚ್ಚು ಗಾಯ

stampade at football
Published on

ಕಸ್ಕಟ್ಲಾನ್‌: ಫುಟ್‌ಬಾಲ್ ಪಂದ್ಯಾಟದ ವೇಳೆ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 12 ಜನರು ಮೃತಪಟ್ಟು, 500ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದಾರುಣ ಘಟನೆ ಎಲ್.ಸಾಲ್ವಡಾರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರು ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ನಿನ್ನೆ ಎಲ್.ಸಾಲ್ವಡಾರ್‌ನ ಕುಸ್ಕಾಟ್ಲಾನ್‌ನಲ್ಲಿರುವ ಸ್ಮಾರಕ ಕ್ರೀಡಾಂಗಣದಲ್ಲಿ ಸ್ಥಳೀಯ ತಂಡ ಅಲಿಯಾಂಜಾ ಮತ್ತು ಎಫ್‌ಎಎಸ್ ನಡುವಿನ ಕ್ವಾರ್ಟರ್ ಫೈನಲ್ ನಡುವಿನ ಪಂದ್ಯಾಟದ ವೇಳೆ ಈ ಆಘಾತಕಾರಿ ಘಟನೆ ನಡೆದಿದೆ. ಈ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು.

ಈ ವೇಳೆ ಕ್ರೀಡಾಂಗಣದ ಸಿಬ್ಬಂದಿ ಪ್ರವೇಶ ದ್ವಾರಗಳನ್ನು ಮುಚ್ಚಲು ಪ್ರಯತ್ನಿಸಿದಾಗ, ಅಭಿಮಾನಿಗಳ ಅತಿರೇಕತನದಿಂದಾಗಿ ಭೀಕರ ಕಾಲ್ತುಳಿತ ನಡೆದಿದೆ. ಈ ಘಟನೆಯಲ್ಲಿ ಹಲವು ಪುರುಷರು ಹಾಗೂ ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net